Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಕನ್ನಡ ರಾಜ್ಯೋತ್ಸವಕ್ಕೆ ಬೆಳಗಾವಿಗೆ ಬರುವವರಿಗೆ ಹೋಳಿಗೆ ಊಟ 


ಬೆಳಗಾವಿ : ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲು ಇದೀಗ ಸಿದ್ದತೆಗಳು ನಡೆದಿವೆ. ಮೂರು ವರ್ಷಗಳ ಬಳಿಕ ಇಲ್ಲಿ ಕನ್ನಡ ರಾಜ್ಯೋತ್ಸವ ನಡೆಯುತ್ತಿರೋದ್ರಿಂದ ಅದ್ಧೂರಿಯಾಗಿ ಆಚರಣೆ ಮಾಡಲು ತೀರ್ಮಾನ ಮಾಡಲಾಗಿದೆ.

ಇದಕ್ಕಾಗಿ ಕನ್ನಡ ರಾಜ್ಯೋತ್ಸವದಲ್ಲಿ ಭಾಗಿಯಾಗುವ 50 ಸಾವಿರ ಜನರಿಗೆ ಹುಕ್ಕೇರಿ ಹಿರೇಮಠ ವತಿಯಿಂದ 1 ಲಕ್ಷ ಹೋಳಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿದೆ.

ಈ ವಿಚಾರವಾಗಿ ಮಾತನಾಡಿದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಈ ಬಾರೀ ಅದ್ಧೂರಿಯಾಗಿ ರಾಜ್ಯೋತ್ಸವ ಆಚರಣೆ ಮಾಡಲು ಇಚ್ಚಿಸಿದ್ದೇವೆ‌. ಅದರಂತೆ ಒಬ್ಬರಿಗೆ ಎರಡು ಹೋಳಿಗೆ ಪ್ರಕಾರ ಒಂದು ಲಕ್ಷ ಹೋಳಿಗೆ ಮಾಡಿಸಲು ತಯಾರಿ ಮಾಡಿದ್ದೇವೆ. ಹೋಳಿಗೆ ಜೊತೆಗೆ ಊಟದಲ್ಲಿ ಬದನೆಕಾಯಿ ಪಲ್ಯ, ಅನ್ನ-ಸಾಂಬಾರು ಇರುತ್ತದೆ. ಇದಕ್ಕಾಗಿ ಹುಕ್ಕೇರಿ ತಾಲೂಕಿನ ಯಮಕನಮರಡಿಯ 200 ಬಾಣಸಿಗರು ಬರಲಿದ್ದಾರೆ. 150 ಜನ ಹೆಣ್ಣುಮಕ್ಕಳಿಂದ ಹೋಳಿಗೆ, 50 ಪುರುಷರಿಂದ ಅನ್ನ-ಸಾಂಬರು, ಕಾಯಿಪಲ್ಯ ತಯಾರಿಸಲಾಗುತ್ತದೆ ಎಂದರು.

ಇನ್ನು, ಹೋಳಿಗೆ ದಾಸೋಹಕ್ಕೆ ಹಿರಿಯ ನಟ ಸಾಯಿಕುಮಾರ ಹಾಗೂ ಸಚಿವ ಗೋವಿಂದ ಕಾರಜೋಳ ಅವರು ಚಾಲನೆ ನೀಡಲಿದ್ದಾರೆ.

ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಯಿಂದಲೇ ಹೋಳಿಗೆ ದಾಸೋಹ ಪ್ರಾರಂಭ ಆಗಲಿದೆಯಂತೆ. ಹೀಗಾಗಿ ರಾಜ್ಯೋತ್ಸವಕ್ಕೆ ರಾಜ್ಯ ಸರ್ಕಾರ ವಿಶೇಷ ಅನುದಾನ ನೀಡಬೇಕು ಎಂದು ಸ್ವಾಮೀಜಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.


A B Dharwadkar
the authorA B Dharwadkar

Leave a Reply