ಬೆಂಗಳೂರು : ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ 5 ವರ್ಷಗಳ ಕಾಲ ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು ಈ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸುದ್ದಿಗಾರರೊಂದಿಗೆ ಮಾತನಾಡಿ, ಪಿಎಫ್ ಐ ಬ್ಯಾನ್ ಮಾಡಿರುವುದು ನಾನು ಸ್ವಾಗತಿಸುತ್ತೇನೆ. ದುಷ್ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ ಪಿಎಫ್ ಐ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.
ಕೇಂದ್ರ ಸರ್ಕಾರ ಬಲವಾದ ಸಾಕ್ಷ್ಯ ಸಂಗ್ರಹಿಸಿ ಈ ತೀರ್ಮಾನ ತೆಗೆದುಕೊಂಡಿದೆ. ದೇಶದ ಏಕತೆ, ಸಮಗ್ರತೆ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಒಳ್ಳೆಯ ನಿರ್ಧಾರ ಮಾಡಿದೆ ಎಂದರು.
ಕೇಂದ್ರ ಸರ್ಕಾರವು ಪಿಎಫ್ಐ ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ.