ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪಿಎ ಹರೀಶ ಎಂಬುವವರನ್ನು ಮಹಿಳೆ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಸರ್ಕಾರದ ಮಹತ್ವದ ದಾಖಲೆಗಳನ್ನು ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.
ಪರಿಷತ್ ಡಿ ದರ್ಜೆ ನೌಕರಳಾಗಿರುವ ಯುವತಿಯು ಬೊಮ್ಮಾಯಿ ಅವರ ಪಿಎ ಆಗಿರುವ ಹರೀಶ ಅವರಿಗೆ ಹನಿಟ್ರ್ಯಾಪ್ ಮಾಡಿದ್ದು, ಬಳಿಕ ಬ್ಲ್ಯಾಕಮೇಲ್ ಮೂಲಕ ಹಲವು ಮಹತ್ವದ ದಾಖಲೆಗಳನ್ನು ಪಡೆದಿದ್ದಾಳೆ. ಅಲ್ಲದೇ ಹಣ ವಸೂಲಿಯನ್ನೂ ಮಾಡಿದ್ದಾಳೆ. ಹೀಗೆ ಪಡೆದ ದಾಖಲೆಗಳನ್ನು ವಿರೋಧ ಪಕ್ಷಗಳಿಗೆ ನೀಡಿರುವ ಅನುಮಾನವಿದೆ ಎಂದು ಜನ್ಮಭೂಮಿ ಫೌಂಡೇಶನ್ ಅಧ್ಯಕ್ಷ ನಟರಾಜ ಶರ್ಮಾ ವಿಧಾನಸೌಧ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಆರಂಭದಲ್ಲಿ ಯುವತಿ ಪಿಎ ಹರೀಶ ಜೊತೆ ಸಲುಗೆ ಬೆಳೆಸಿ ಟ್ರ್ಯಾಪ್ ಮಾಡಿದ್ದಾಳೆ. ಬಳಿಕ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕಮೇಲ್ ಮೂಲಕ ದಾಖಲೆಗಳನ್ನು ಪಡೆದುಕೊಂಡಿದ್ದಾಳೆ. ಹನಿಟ್ರ್ಯಾಪ್ ಗೆ ಒಳಗಾಗಿದ್ದ ಹರೀಶ ಅವರನ್ನು ಈಗಾಗಲೇ ಸೇವೆಯಿಂದ ತೆಗೆದು ಹಾಕಲಾಗಿದೆ ಎನ್ನಲಾಗಿದೆ. ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ದೂರು ದಾಖಲಿಸಲಾಗಿದೆ.