ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಮನೆ ಬೆಂಕಿಗಾಹುತಿಯಾದ ಘಟನೆ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಸಿಲಿಂಡರ್ ಸ್ಪೋಟದಿಂದ ಬೆಂಕಿ ತಗುಲಿ ಮಾಬುಸಾಬ್ ಎಂಬುವರ ಮನೆ ಸುಟ್ಟು ಕರಕಲಾಗಿದೆ. ಸ್ಪೋಟದ ಶಬ್ದಕ್ಕೆ ಕೇಳಿ ಕುಟುಂಬದವರು ಮನೆಯಿಂದ ಹೊರಗೆ ಬಂದಿದ್ದಾರೆ.
ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಸ್ಪೋಟ ಹಾಗೂ ಬೆಂಕಿಯಿಂದಾಗಿ ಮನೆಯಲ್ಲಿದ್ದ ಬಟ್ಟೆ, ಗೃಹ ಉಪಯೋಗಿ ವಸ್ತುಗಳು ಸೇರಿದಂತೆ ಎಲ್ಲಾ ವಸ್ತುಗಳು ಸುಟ್ಟಿವೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.