This is the title of the web page

ಅಗತ್ಯ ಬಿದ್ದರೆ ಶಾಲೆ ಮತ್ತೆ ಬಂದ್

[contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form]

ಬೆಂಗಳೂರು, 6- ರಾಜ್ಯದ ಕೆಲವು ಶಾಲಾ-ಕಾಲೇಜುಗಳಲ್ಲಿ ಕೊರೋನಾ ಹೆಚ್ಚಾಗುತ್ತಿದ್ದು ಮಕ್ಕಳ ಜೀವದ ಜೊತೆ ನಾವು ಚೆಲ್ಲಾಟವಾಡದೇ ಬದಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ ಹೇಳಿದ್ದಾರೆ.

ಇತ್ತೀಚೆಗಷ್ಟೇ ಶಾಲೆಗಳು ಆರಂಭವಾಗಿದ್ದು ಈಗ ಮತ್ತೆ ಅಲ್ಲಲ್ಲಿ ಶಾಲಾ-ಕಾಲೇಜು ಮಕ್ಕಳಲ್ಲಿ ಸೋಂಕು ಉಲ್ಭಣವಾಗುತ್ತಿದೆ. ಈ ಬಗ್ಗೆ ಸೋಮವಾರ ವಿಧಾನ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೊರೋನಾ ಸೋಂಕು ಹೆಚ್ಚಳವಾದರೆ ಬದಲಿ ಕ್ರಮ ಏನು ತೆಗೆದುಕೊಳ್ಳಬೇಕೆಂದು ಯೋಚಿಸುತ್ತೇವೆ. ಅಕಸ್ಮಾತ್ ಪರೀಕ್ಷೆ ಮತ್ತು ಭೌತಿಕ ತರಗತಿಗಳನ್ನು ನಿಲ್ಲಿಸಬೇಕೆಂದರೆ ಆ ಕ್ರಮಕ್ಕೂ ಸಿದ್ಧರಿದ್ದೇವೆ ಎಂದರು. ಅಗತ್ಯಬಿದ್ದರೆ ಶಾಲೆಗಳನ್ನು ನಿಲ್ಲಿಸುವ ನಿರ್ಧಾರ ಕೈಗೊಳ್ಳುವ ಸೂಚನೆಯನ್ನೂ ಶಿಕ್ಷಣ ಸಚಿವರು ನೀಡಿದರು.

ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವುದಾದರೆ ಶಿಕ್ಷಣ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳುತ್ತದೆ. ಶಾಲೆಗಳನ್ನು, ಪರೀಕ್ಷೆಗಳನ್ನು ನಿಲ್ಲಿಸಬೇಕಾದ ಅನಿವಾರ್ಯತೆ ಎದುರಾದರೆ ಹಿಂದೇಟು ಹಾಕುವುದಿಲ್ಲ, ಇವತ್ತಿನ ತಜ್ಞರ ವರದಿಯಲ್ಲಿ ಯಾವುದೇ ಗಾಬರಿಪಡುವ ಅಗತ್ಯವಿಲ್ಲ ಎಂದು ಹೇಳುತ್ತಿದ್ದಾರೆ ಎಂದರು.

ಚಿಕ್ಕಮಗಳೂರಿನ ಜವಾಹರ ನವೋದಯ ವಸತಿ ಶಾಲೆಯ ಮಕ್ಕಳಿಗೆ ಸೋಂಕು ತಗುಲಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಚಿಕ್ಕಮಗಳೂರು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಹೋಗಿ ಆರೋಗ್ಯ ಮತ್ತು ಇತರ ಮೂಲಭೂತ ವ್ಯವಸ್ಥೆಯ ಉಸ್ತುವಾರಿ ನೋಡಿಕೊಂಡಿದ್ದಾರೆ. ವಸತಿ ಶಾಲೆಯ ಮಕ್ಕಳಿಗೆ ವೈದ್ಯರು, ಹಗಲು-ರಾತ್ರಿ ಶುಶ್ರೂಷಕಿಯರ ಸೇವೆಯನ್ನು ಇರಿಸಿದ್ದಾರೆ. ಸೋಂಕಿತ ಮಕ್ಕಳು, ಶಿಕ್ಷಕರು ಮತ್ತು ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದರು.

ಇತ್ತೀಚೆಗೆ ಹಲವು ಶಾಲೆಗಳಲ್ಲಿ ಹತ್ತಾರು ಮಕ್ಕಳಿಗೆ ಸೋಂಕು ಕಾಣಿಸಿಕೊಳ್ಳುತ್ತಿರುವುದರಿಂದ ಶಾಲೆಗಳಲ್ಲಿ ಕೋವಿಡ್ ಶಿಷ್ಠಾಚಾರಗಳನ್ನು ಕಠಿಣವಾಗಿ ಜಾರಿಗೆ ತರುವ ಬಗ್ಗೆ ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ಜಾರಿಗೆ ತರಲಾಗುವುದು ಎಂದು ಅವರು ಹೇಳಿದರು.

ವಸತಿ ಶಾಲೆಗಳಲ್ಲಿ ಇತ್ತೀಚೆಗೆ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಕೊರೋನಾ ಶಿಷ್ಠಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಆದೇಶ ಹೊರಡಿಸಲಾಗುವುದು ಎಂದರು.

ಕಳೆದೊಂದು ವಾರದಿಂದ ಕೊರೋನಾ ರೂಪಾಂತರಿ ಓಮಿಕ್ರಾನ್ ಆತಂಕ ಹೆಚ್ಚಾಗಿದೆ. ಆದರೆ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಹೇಳುತ್ತಿದ್ದಾರೆ. ಫೆಬ್ರವರಿಯಲ್ಲಿ ಸೋಂಕು ಉಲ್ಬಣವಾಗಬಹುದು ಎನ್ನುತ್ತಿದ್ದಾರೆ. ಅಷ್ಟರೊಳಗೆ ಮಕ್ಕಳಿಗೆ ಸಹ ಕೊರೋನಾ ಲಸಿಕೆ ಬರಬಹುದು ಎಂದು ಶಿಕ್ಷಣ ಸಚಿವರು ಹೇಳಿದರು.

You might also like
Leave a comment