ಮಂಡ್ಯ: ಮತ್ತೆ ನಾವು ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು ಉಚಿತವಾಗಿ 10 ಕೆಜಿ ಅಕ್ಕಿಯನ್ನು ವಿತರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ಮಾತನಾಡಿದ ಅವರು, ನಾವು ಮತ್ತೆ ಅಧಿಕಾರಕ್ಕೆ ಬಂದರೆ ಉಚಿತವಾಗಿ 10 ಕೆಜಿ ಅಕ್ಕಿ ನೀಡುತ್ತೇವೆ. ಬಿಜೆಪಿಯವರು ಅನ್ನಭಾಗ್ಯ ಯೋಜನೆಯ ಅಕ್ಕಿ ಕಡಿತ ಮಾಡಿದ್ದಾರೆ. ನಾವು ಅಧಿಕಾರಕ್ಕೆ ಬಂದರೆ ಕೋಟಿ ಜನರಿಗೆ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ ಎಂದರು.
ಸಚಿವ ನಾರಾಯಣಗೌಡ ಜೆಡಿಎಸ್ ನಿಂದ ಬಿಜೆಪಿಗೆ ಹೋದ ಗಿರಾಕಿ. ನಾರಾಯಣಗೌಡ ಕೆ ಆರ್ ಪೇಟೆಯಲ್ಲಿ ಒಂದೇ ಒಂದು ಮನೆ ಕೊಟ್ಟನಾ…ಬಿಜೆಪಿಯವರ ಮನೆ ಹಾಳಾಗ ಒಂದೇ ಒಂದು ಮನೆ ಕಟ್ಟಸಲು ಆಗಿಲ್ಲ ಎಂಬುದಾಗಿ ಕಿಡಿಕಾರಿದರು.
ಕಾಂಗ್ರೆಸ್ ಗೆದ್ದರೇ ನನಗೆ ಶಕ್ತಿ ಬಂದಂತೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೇ ಮಾತ್ರ ರಾಜ್ಯ ಉಳಿಸಲು ಸಾಧ್ಯವಿದೆ. ಮಂಡ್ಯದಲ್ಲಿನ 7 ಕ್ಷೇತ್ರಗಳಲ್ಲಿ 7 ಕಾಂಗ್ರೆಸ್ ಗೆದ್ದರೇ ನನಗೆ ಶಕ್ತಿ. ನಾನು ಹೇಳಿದವರಿಗೆ ಮಾತ್ರ ಮತ ಹಾಕಿ ಎಂದು ಹೇಳಿದರು.