ಬೆಂಗಳೂರು : ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ 212 ಮೇಲ್ವಿಚಾರಕ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ವಿಧಾನಸಭೆಯಲ್ಲಿ ಶಾಸಕ ಕುಮಾರ ಬಂಗಾರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಒಟ್ಟು 1142 ನಿಲಯ ಮೇಲ್ವಿಚಾರಕ ಹುದ್ದೆಗಳು ಖಾಲಿ ಇವೆ. ಈ ಪೈಕಿ 211 ಪುರುಷ ಹಾಗೂ 221 ಮಹಿಳಾ ಮೇಲ್ವಚಾರಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗಿದೆ. ಪ್ರಸ್ತು 212 ಹುದ್ದೆಗಳನ್ನು ಕೆಪಿಎಸ್‍ಸಿ ಮೂಲಕವೇ ಭರ್ತಿ ಮಾಡಿಕೊಳ್ಳುತ್ತೇವೆ ಎಂದರು.
ಕೆಪಿಎಸ್‍ಸಿ ಆಯ್ಕೆ ಪಟ್ಟಿಯಲ್ಲಿ ಹುದ್ದೆ ನಿರಾಕರಿಸಿರುವ ಅಭ್ಯರ್ಥಿಗ ಬದಲಿಗೆ ಹೆಚ್ಚುವರಿ ಅಭ್ಯಥಿಗಳನ್ನು ಆಯ್ಕೆ ಮಾಡಿ ಇಲಾಖೆ ನೀಡುವಂತೆ ಇಲಾಖೆಗೆ ಮತ್ತೊಂದು ಪತ್ರ ಬರೆದಿದ್ದೇವೆ. ನಮಗೆ ಅಲ್ಲಿಂದ ಅನುಮತಿ ಸಿಕ್ಕ ತಕ್ಷಣವೇ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸ್ಥಳ ನಿಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.