ನವದೆಹಲಿ: ನಿವೃತ್ತ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ವ್ಯವಸ್ಥೆ ಮತ್ತೆ ಜಾರಿಗೆ ತರುವುದರಿಂದ ಭವಿಷ್ಯದ ತೆರಿಗೆದಾರರ ಮೇಲೆ ಹೊರೆ ಹೆಚ್ಚಾಗಲಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೇರಿ ಹೇಳಿದ್ದಾರೆ.
ಖರ್ಚು ವೆಚ್ಚಗಳಲ್ಲಿ ಸುಸ್ಥಿರ ಬೆಳವಣಿಗೆಗೆ ಉತ್ತೇಜನ ನೀಡಬೇಕಿರುವ ಸಂದರ್ಭದಲ್ಲಿ ನಿವೃತ್ತ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ವ್ಯವಸ್ಥೆ ಮತ್ತೆ ಜಾರಿಗೆ ತರುತ್ತಿರುವುದು ಭವಿಷ್ಯದ ತೆರಿಗೆದಾರರ ಮೇಲೆ ಹೊರೆ ಹೆಚ್ಚುವಂತೆ ಮಾಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಯೋಜನೆಗೆ ಬೇಕಿರುವ ಹಣವನ್ನು ಮುಂದಿನ ತೆರಿಗೆದಾರರು ಪಾವತಿಸಬೇಕಾಗುತ್ತದೆ. ಅಧಿಕಾರಕ್ಕೆ ಬರಲು ರಾಜಕೀಯ ಪಕ್ಷಗಳು ಒಪಿಎಸ್ ಜಾರಿಗೊಳಿಸುವ ಭರವಸೆ ನೀಡುತ್ತಿವೆ. ಆದರೆ, ಭವಿಷ್ಯದಲ್ಲಿ ಆರ್ಥಿಕ ಹೊರೆ ಹೊರಬೇಕಾಗುತ್ತದೆ ಎಂದು ಹೇಳಿದ್ದಾರೆ.
ಒಪಿಎಸ್ ವ್ಯವಸ್ಥೆಯಲ್ಲಿ ಪಿಂಚಣಿ ಹಣವನ್ನು ಸರ್ಕಾರ ಪಾವತಿಸುತ್ತದೆ. 2004 ರಿಂದ ಈ ಯೋಜನೆ ರದ್ದು ಮಾಡಲಾಗಿದೆ. ರಾಜಸ್ಥಾನ, ಛತ್ತೀಸಗಡ, ಹಿಮಾಚಲ ಪ್ರದೇಶ, ಪಂಜಾಬ್, ಜಾರ್ಖಂಡ್ ನಲ್ಲಿ ಸರ್ಕಾರಗಳು ಒಪ್ಪಿಗೆ ನೀಡಿವೆ. ಇಂತಹ ವ್ಯವಸ್ಥೆಯಿಂದ ಮುಂದಿನ ತೆರಿಗೆದಾರರಿಗೆ ಹೊರೆಯಾಗುತ್ತದೆ ಎಂದು ಹೇಳಲಾಗಿದೆ.