Live Stream

November 2022
W T F S S M T
 1
2345678
9101112131415
16171819202122
23242526272829
30  

| Latest Version 8.2.9 |

State News

‘ಎಲೆ ಚುಕ್ಕಿ’ ರೋಗ ನಿರ್ವಹಣೆ ಕುರಿತು ಮಹತ್ವದ ಮಾಹಿತಿ


ಬೆಂಗಳೂರು, ೧೮- ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಡಕೆಗೆ ಎಲೆಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಅಡಿಕೆ ಸಂಶೋಧನಾ ಕೇಂದ್ರ ಈ ರೋಗ ನಿರ್ವಹಣೆ ಕುರಿತು ಮಹತ್ವದ ಮಾಹಿತಿ ನೀಡಿದೆ.

ರೋಗಭಾದಿತ ಒಣಗಿದ ಗರಿಗಳನ್ನು ಕತ್ತರಿಸಿ ತೆಗೆದು ನಾಶಪಡಿಸುವುದರಿಂದ ರೋಗ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯಬಹುದು. ಬಿಸಿಲು ಬೀಳುವಂತೆ ಮಾಡಲು ಅಂತರ ಬೆಳೆಗಳ ಅಥವಾ ಕಾಡು ಮರಗಳ ಹೆಚ್ಚುವರಿ ರೆಂಬೆಗಳನ್ನು ಕತ್ತರಿಸಿ ತೆಗೆಯುವುದು.

ಮರಗಳ ಉತ್ತಮ ಬೆಳವಣಿಗೆಗೆ ಕೊಟ್ಟಿಗೆ ಗೊಬ್ಬರದ ಜೊತೆಗೆ ಶಿಫಾರಿತ ಪೋಷಕಾಂಶಗಳಾದ ಸಾರಜನಕ:ರಂಜಕ: ಪೊಟ್ಯಾಷ್ (100:40:140 ಗ್ರಾಂ ಪ್ರತಿಮರಕ್ಕೆ) ನೀಡಬೇಕು.

ಶೇಕಡಾ ಒಂದರ ಬೋರ್ಡೋ ದ್ರಾವಣ ಅಥವಾ ಶೇಕಡಾ 0.3 ರ ತಾಮ್ರದ ಆಕ್ಸಿ ಕ್ಲೋರೈಡ್ ಸಿಂಪಡಿಸುವುದು ಎಂದು ತಿಳಿಸಲಾಗಿದೆ.


Leave a Reply