ಬೆಂಗಳೂರು, ೮- ಕೋಳಿ ಸಾಕಾಣಿಕೆಗೆ ಬಳಕೆ ಮಾಡುವ ಕೃಷಿ ಭೂಮಿಗೆ ಭೂ ಪರಿವರ್ತನೆಯಿಂದ ವಿನಾಯಿತಿ ನೀಡಿ ಸುತ್ತೋಲೆ ಹೊರಡಿಸಲಾಗಿದೆ.
ಭೂ ಪರಿವರ್ತನೆ ಮಾಡುವ ಸಂಬಂಧ ಕೋಳಿ ಸಾಕಾಣಿಕೆದಾರರಿಗೆ ಅನಾನುಕೂಲವಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ.
ಹೀಗಾಗಿ ಕೋಳಿ ಸಾಕಣೆಯನ್ನು ಕೃಷಿ ಎಂದು ವ್ಯಾಖ್ಯಾನಿಸಲಾಗಿದ್ದು, ಇದಕ್ಕಾಗಿ ಬಳಸುವ ಭೂಮಿಯನ್ನು ಕೃಷಿಯೇತರ ಭೂಮಿಯಾಗಿ ಪರಿವರ್ತಿಸುವ ಅಗತ್ಯ ಇಲ್ಲ ಎಂದು ಕಂದಾಯ ಇಲಾಖೆ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.