ತುಮಕೂರು: ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನಿರಾಕರಿಸುವಂತಿಲ್ಲ, ಯಾವುದೇ ದಾಖಲೆಗಳು ಅಗತ್ಯವಿಲ್ಲ ಎಂದು ಸರ್ಕಾರದಿಂದ ಮತ್ತೊಮ್ಮೆ ಸುತ್ತೋಲೆ ಹೊರಡಿಸಲಾಗಿದೆ.
ಆರೋಗ್ಯ ಸಚಿವ ಡಾ.ಕೆ. ಸುಧಾಕರ ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ತುರ್ತು ಆರೋಗ್ಯ ಸೇವೆ ಸಂದರ್ಭದಲ್ಲಿ ಯಾವುದೇ ದಾಖಲೆಗಳು ಅಗತ್ಯವಿಲ್ಲ ಎಂಬ ಸುತ್ತೋಲೆ ಮತ್ತೊಮ್ಮೆ ಹೊರಡಿಸಲಾಗಿದೆ. ತುರ್ತು ಚಿಕಿತ್ಸೆ ಅಗತ್ಯದ ಸಂದರ್ಭದಲ್ಲಿ ದಾಖಲೆಗಳಿಗಾಗಿ ಒತ್ತಾಯಿಸಬಾರದು ಎಂದು ಹೇಳಿದ್ದಾರೆ.
ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷದಿಂದ ಅವಳಿ ಮಕ್ಕಳೊಂದಿಗೆ ತಾಯಿ ಸಾವನ್ನಪ್ಪಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಚಿವ ಸುಧಾಕರ್ ಗುರುವಾರ ರಾತ್ರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆ ನಿರ್ಲಕ್ಷತನದ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.