Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಕಾನ್ಸಟೇಬಲ್ ಹುದ್ದೆಗಳ ವಯೋಮಿತಿ ಹೆಚ್ಚಳ; ರಾಜ್ಯ ಸರ್ಕಾರದ ಆದೇಶ 


ಬೆಂಗಳೂರು: ಪೊಲೀಸ್ ಕಾನ್ಸಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿಯನ್ನು ಹೊರಡಿಸಿದ್ದು, ಪೊಲೀಸ್ ಕಾನ್ಸಟೇಬಲ್ (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗದಿ ಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ 2022-23ನೇ ಸಾಲಿನಲ್ಲಿ ನೇಮಕಾತಿಗೆ ಕರೆದಿರುವ ಪೊಲೀಸ್ ಕಾನ್ಸ್ ಟೇಬಲ್ 420+3064 ಸೇರಿ ಒಟ್ಟು 3484 ಹುದ್ದೆಗಳಿಗೆ ಮತ್ತು ಪೊಲೀಸ್ ಕಾನ್ಸಟೇಬಲ್ ( ಸಿವಿಲ್ ) 1137+454 ಸೇರಿದಂತೆ 1591 ಹುದ್ದೆಗಳಿಗೆ ಮಾತ್ರ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಹುದ್ದೆಗಳಿಗೆ ಗರಿಷ್ಠ ವಯೋಮಿತಿಯ ಕುರಿತಂತೆ ಸಂಬಂಧಿಸಿದ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡುವ ಷರತ್ತಿಗೆ ಒಳಪಟ್ಟು ಈ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.


A B Dharwadkar
the authorA B Dharwadkar

Leave a Reply