ಬೆಂಗಳೂರು: ನಾಡಿನ ಪ್ರತಿಷ್ಠಿತ ಚಿತ್ರದುರ್ಗದ ಮುರುಘಾ ಮಠದ ಪೀಠಾಧ್ಯಕ್ಷ ಸ್ಥಾನದಿಂದ ಶಿವಮೂರ್ತಿ ಮುರುಘಾ ಶರಣರನ್ನು ವಜಾಗೊಳಿಸಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ.
ಈ ನಡುವೆ ಪೀಠಾಧ್ಯಕ್ಷ ಸ್ಥಾನದಿಂದ ಅವರನ್ನು ವಜಾಗೊಳಿಸಿ ಬೇರೆಯವರನ್ನು ನೇಮಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ.
ಮಾಜಿ ಸಚಿವ ಏಕಾಂತಯ್ಯ ನೇತೃತ್ವದಲ್ಲಿ ವೀರಶೈವ ಲಿಂಗಾಯಿತ ಸಮಾಜದ ಹಲವು ಮುಖಂಡರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಗಂಭೀರ ಆರೋಪವಿದ್ದು, ಭಕ್ತರ ಮತ್ತು ಜನರ ಮನಸ್ಸಿಗೆ ಘಾಸಿಯಾಗಿದೆ. ಪೀಠಕ್ಕೆ ಗೌರವ ತರಲು ಅವರನ್ನು ವಜಾಗೊಳಿಸಿ ಹೊಸ ಪೀಠಾಧ್ಯಕ್ಷರನ್ನು ನೇಮಿಸಬೇಕೆಂದು ಒತ್ತಡ ಹೇರಲಾಗಿದೆ.