Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಪಿಯು ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮಾಹಿತಿ


ಬೆಂಗಳೂರು, ೧೯- ಪಿಯು ಪರೀಕ್ಷೆ ಬರೆಯಲಿರುವ ಖಾಸಗಿ ಅಭ್ಯರ್ಥಿಗಳು, ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023ರ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿಯ ಮೇರೆಗೆ ಈ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ನವೆಂಬರ 28 ರ ವರೆಗೆ ವಿದ್ಯಾರ್ಥಿಗಳು ನೋಂದಾವಣಿ ಮಾಡಿಕೊಳ್ಳಬಹುದಾಗಿದೆ.

ನಿಗದಿತ ಶುಲ್ಕದ ಜೊತೆಗೆ 500 ರೂಪಾಯಿ ದಂಡ ಶುಲ್ಕ ಹಾಗೂ ಗರಿಷ್ಠ 700 ರೂಪಾಯಿ ಕಾರ್ಯನಿರತ ಶುಲ್ಕ ಪಾವತಿಸಿ ನೋಂದಾಯಿಸಿಕೊಳ್ಳಬಹುದಾಗಿದೆ. ನವೆಂಬರ 28 ಕಾಲೇಜಿಗೆ ಶುಲ್ಕ ಪಾವತಿಸಲು ಕೊನೆ ದಿನಾಂಕವಾಗಿದ್ದು, ಕಾಲೇಜಿನವರು ನವೆಂಬರ 29 ರಂದು ಖಜಾನೆಗೆ ಸಂದಾಯ ಮಾಡಲು ಹಾಗೂ ಡಿಡಿಪಿಗೆ ಕಚೇರಿಗೆ ಅರ್ಜಿ ಸಲ್ಲಿಸಲು ನವೆಂಬರ್ 30 ಅಂತಿಮ ದಿನವಾಗಿದೆ.


Leave a Reply