ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮಂಗಳವಾರ ತಡರಾತ್ರಿ ಹೈಕೋರ್ಟ ಅನುಮತಿ ನೀಡಿದ ಹಿನ್ನೆಲೆ ಹಿಂದೂ ಸಂಘಟನೆಗಳು ಬೆಳಗ್ಗೆ 7.30ಕ್ಕೆ ಗಣೇಶನ ಮೂರ್ತಿಯನ್ನು ತಂದು ಪ್ರತಿಷ್ಠಾಪನೆ ಮಾಡಿವೆ.
ಗಣೇಶ ಮೂರ್ತಿಯನ್ನು ಮಧ್ಯಾಹ್ನ 1 ಗಂಟೆಗೆ ಪ್ರತಿಷ್ಠಾಪನೆಯನ್ನು ಮಾಡಲು ಸಮಯ ನಿಗದಿಯಾಗಿತ್ತು. ಆದರೆ ಬೆಳಿಗ್ಗೆ 7.30ಕ್ಕೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿವಾದವನ್ನು ಇತ್ಯರ್ಥಪಡಿಸಿದ ಹೈಕೋರ್ಟ, ರಾಣಿ ಚೆನ್ನಮ್ಮ ಗಣೇಶೋತ್ಸವ ಮಹಾಮಂಡಳಿ ಸಮಿತಿಗೆ ಗಣೇಶೋತ್ಸವದ ಜವಾಬ್ದಾರಿಯನ್ನು ನೀಡಿದೆ.
ಈ ನಿಟ್ಟಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮೈದಾನದಲ್ಲಿ ಗಣೇಶನನ್ನು ಪ್ರತಿಷ್ಠಾನ ಮಾಡಲಿರುವ ಮಹಾಮಂಡಳಿ ಸಮಿತಿಯು ಎಲ್ಲ ಸಿದ್ಧತೆಗಳನ್ನು ನಡೆಸಿಕೊಂಡಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮೈದಾನದ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.