Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

National News

ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಹೆಂಡತಿಯನ್ನು ಉಳಿಸುವ ಬದಲು ವಿಡಿಯೋ ಮಾಡಿದ ಪತಿ!; ವಿಡಿಯೋ ವೈರಲ್


ಲಖನೌ: ಪತ್ನಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸುತ್ತಿರುವುದನ್ನು ನೋಡಿದ ಪತಿ ಆಕೆಯನ್ನು ಉಳಿಸುವ ಬದಲು ಅದನ್ನು ವಿಡಿಯೋ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಗುಲ್ಮೊಹರ ನಗರದಲ್ಲಿ ನಡೆದಿದೆ.

ಶೋಭಿತಾ ಎಂಬುವಳು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ. ಶೋಭಿತಾ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವಾಗ ಆಕೆಯನ್ನು ಉಳಿಸುವ ಯಾವುದೇ ಪ್ರಯತ್ನವನ್ನು ಗಂಡ ಮಾಡಲಿಲ್ಲ. ಬದಲಿಗೆ ಪತಿ ಸಂಜೀವ ಗುಪ್ತಾ ವೀಡಿಯೋ ಮಾಡುತ್ತಾ ನಿಂತಿದ್ದ.

ಈ ವೇಳೆ ಶೋಭಿತಾ ತನ್ನ ಮೊದಲ ಪ್ರಯತ್ನದಲ್ಲಿ ವಿಫಲಳಾದರೂ ಎರಡನೇ ಪ್ರಯತ್ನದಲ್ಲಿ ನೇಣು ಹಾಕಿಕೊಳ್ಳುವಲ್ಲಿ ಆಕೆ ಯಶಸ್ವಿಯಾಗುತ್ತಾಳೆ.

ಶೋಭೀತಾ ನೇಣು ಬಿಗಿದುಕೊಂಡು ಎಷ್ಟೇ ಒದ್ದಾಡುತ್ತಿದ್ದರೂ ಇದನ್ನು ವೀಡಿಯೋ ಮಾಡಿಕೊಳ್ಳುತ್ತಿದ್ದ ಸಂಜೀವ ಗುಪ್ತಾ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಿಲ್ಲ. ಅದಾದ ಬಳಿಕ ಸಂಜೀವ ಗುಪ್ತಾ ಘಟನೆಗೆ ಸಂಬಂಧಿಸಿ ಶೋಭಿತಾಳ ತಂದೆ ರಾಜ ಕಿಶೋರ ಗುಪ್ತಾಗೆ ಕರೆ ಮಾಡಿ, ಶೋಭಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾನೆ. ಈ ಹಿನ್ನೆಲೆಯಲ್ಲಿ ಕಿಶೋರ ಗುಪ್ತಾ ಅವರು ಗುಲ್ಮೊಹರ್ ನಗರದಲ್ಲಿರುವ ಶೋಭಿತಾಳ ಮನೆಗೆ ಹೋಗಿದ್ದಾರೆ.

ಈ ವೇಳೆ ಹಾಸಿಗೆಯ ಮೇಲೆ ಆಕೆಯ ಶವವನ್ನು ಕಂಡಿದ್ದಾರೆ. ಘಟನೆಗೆ ಸಂಬಂಧಿಸಿ ರಾಜ ಕಿಶೋರ ಅವರು  ಸಂಜೀವನನ್ನು ವಿಚಾರಿಸಿದ್ದಾನೆ. ಆ ವೇಳೆ ಸಂಜೀವ್ ವಿಡಿಯೋವನ್ನು ರಾಜ ಕಿಶೋರಗೆ ತೋರಿಸಿದ್ದಾನೆ. ಶೋಭಿತಾಳ ಕುಟುಂಬದವರು ಘಟನೆಗೆ ಸಂಬಂಧಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.


A B Dharwadkar
the authorA B Dharwadkar

Leave a Reply