ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮೈತ್ರಿ ಸರ್ಕಾರ ಇದ್ದಾಗಲೇ ಚಿಲುಮೆ ಸಂಸ್ಥೆಗೆ ಅನುಮತಿ ನೀಡಲಾಗಿತ್ತು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ತನಿಖೆ ನಡೆಸಲಿ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಮ್ಮ ಕಾಲದಲ್ಲಿ ನಡೆದಿತ್ತು, ಇವರ ಕಾಲದಲ್ಲಿ ಇತ್ತು ಎಂಬ ಹೇಳಿಕೆಗಳು ಕೇಳಿಬರುತ್ತಿವೆ. ಈಗ ನಾವು ಮೊದಲು ದೂರು ನೀಡಿದ್ದೇವೆ. ತನಿಖೆ ನಡೆಸಲಿ ಎಂದು ಹೇಳಿದರು.
ಒಂದು ಸಂಸ್ಥೆ ದುಡ್ದು ಇಲ್ಲದೇ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿ, ಬಿಬಿಎಂಪಿ ಆಯುಕ್ತರ ಅನುಮತಿ ಇಲ್ಲದೇ ಮಾಡುತ್ತಾ? ಸರ್ಕಾರ, ಪಾಲಿಕೆಗೆ ಗೊತ್ತಿಲ್ಲದೇ ಮತದಾರರ ಪಟ್ಟಿ ಪರೀಷ್ಕರಣೆ ಮಾಡಲು ಆಗುತ್ತಾ? ನಾವು ಈ ಬಗ್ಗೆ ಕೇಸ್ ದಾಖಲಿಸಿದ್ದೇವೆ. ವೋಟರ್ ಐಡಿ ಅಕ್ರಮದ ಬಗ್ಗೆ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಲಿ ಎಂದು ಆಗ್ರಹಿಸಿದರು.