This is the title of the web page

ಈಶ್ವರಪ್ಪನೇ ಕೊಲೆ ಮಾಡಿಸಿದ್ದು; ಸಿಬಿಐ ತನಿಖೆಗೆ ಸದನದಲ್ಲಿ ಒತ್ತಾಯ

ಬೆಂಗಳೂರು, 22- ಸಚಿವ ಕೆ. ಎಸ್. ಈಶ್ವರಪ್ಪ ಅವರೇ ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿದ್ದಾರೆ. ತನ್ನ ಕುರ್ಚಿ ಉಳಿಸಿಕೊಳ್ಳಲು ಈ ಕೊಲೆ ಮಾಡಿಸಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಹರಿಪ್ರಸಾದ ಗಂಭೀರ ಆರೋಪ ಮಾಡಿದ್ದಾರೆ.

ವಿಧಾನ ಪರಿಷತ್ ನಲ್ಲಿ ಮಾತನಾಡಿದ ಅವರು, ಪರೋಕ್ಷವಾಗಿ ಈಶ್ವರಪ್ಪನವರೇ ಶಿವಮೊಗ್ಗದ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದರು. ತಮ್ಮ ಸ್ಥಾನ ಉಳಿಸಿಕೊಳ್ಳಲು ಈಶ್ವರಪ್ಪ ಕೊಲೆ ಮಾಡಿಸಿದ್ದಾರೆ. ಈ ಬಗ್ಗೆ ಸಿಬಿಐ ತನಿಖೆ ಅಥವಾ ಹೈಕೋರ್ಟ ನ್ಯಾಯಾಧೀಶರಿಂದ ತನಿಖೆ ಮಾಡಿಸಿ ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

ಕೊಲೆಯಾದ ಯುವಕನ ತಾಯಿಯು ತನ್ನ ಮಗ ಎರಡು ವರ್ಷಗಳಿಂದ ಭಜರಂಗದಳದಲ್ಲಿ ಇಲ್ಲ ಎಂದು ಹೇಳಿದ್ದಾರೆ. ಇತ್ತ ಈಶ್ವರಪ್ಪ ಇದು ಮುಸ್ಲಿಂ ಗೂಂಡಾಗಳಿಂದ ಕೊಲೆ ಆಗಿದೆ ಅನ್ನುತ್ತಾರೆ. ಗೃಹ ಸಚಿವರು ಇದ್ದಾಗ ಇವರು ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ಈ ಕೊಲೆಯನ್ನು ಈಶ್ವರಪ್ಪನೇ ಮಾಡಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪೊಲೀಸರ ತನಿಖೆ ಮುನ್ನ ಈಶ್ವರಪ್ಪ ಹೇಳಿಕೆ ಕೊಟ್ಟಿದ್ದಾರೆ. ಅಂದರೆ ಈಶ್ವರಪ್ಪ ಪರೋಕ್ಷವಾಗಿ ಈ ಕೊಲೆ ಮಾಡಿಸಿದ್ದಾರೆ ಎಂದು ಹರಿಪ್ರಸಾದ ವಿಷಯ ಪ್ರಸ್ತಾಪ ಮಾಡಿದರು. ಈ ವೇಳೆ ಸದನದಲ್ಲಿ ಮಾತಿನ ಚಕಮಕಿ ನಡೆದು ಹರಿಪ್ರಸಾದ ವಿರುದ್ಧ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಈಶ್ವರಪ್ಪರ ಹೇಳಿಕೆ ಸರಿಯಲ್ಲ. ಇದು ಅಶಾಂತಿ ಸೃಷ್ಟಿಸುವ ಹೇಳಿಕೆಯಾಗಿದೆ. ಇದು ಅವರ ಸ್ಥೂಲ ಕಲ್ಪನೆ. ಅಪರಾಧಿಗಳು ಯಾರು ಎಂಬುದು ಇನ್ನೂ ತನಿಖೆಯೇ ಆಗಿಲ್ಲ. ಆದರೂ ಕೋಮುಗಲಭೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ, ಜನರನ್ನು ದಾರಿ ತಪ್ಪಿಸಲು ಹೇಳಿಕೆ ನೀಡುತ್ತಿದ್ದಾರೆ ಎಂದು ಹರಿಪ್ರಸಾದ ಕಿಡಿಕಾರಿದ್ದಾರೆ.

ರಾಷ್ಟ್ರಧ್ವಜದ ಅವಮಾನ ಸಂಬಂಧ  ಈಗಾಗಲೇ ನಾವು ಈಶ್ವರಪ್ಪ ಅವರ ರಾಜೀನಾಮೆ ಕೇಳುತ್ತಿದ್ದೇವೆ, ಅದನ್ನು ಅವರು ಕೊಡಲೇಬೇಕು. ಪೊಲೀಸರ ತನಿಖೆಯಾಗದೇ ಅವರು ಆಪಾದನೆ ಮಾಡುತ್ತಿದ್ದಾರೆ. ತನಿಖೆ ನಡೆಸುವುದು ಪೊಲೀಸರ ಜವಾಬ್ದಾರಿಯಾಗಿದೆ. ಇಂತಹ ಸಂದರ್ಭದಲ್ಲಿ ಇಂಟೆಲಿಜೆನ್ಸ್ ಏನು ಮಾಡುತ್ತಿದೆ. ಡಿ.ಕೆ ಶಿವಕುಮಾರ ಮೇಲೆ ಆಪಾದನೆ ಮಾಡಿ ಏನೂ ಸಾಧಿಸಲಾಗದು. ಕ್ರಿಮಿನಲ್ ಹಿನ್ನೆಲೆಯುಳ್ಳವರೇ ಸಚಿವರಾಗಿದ್ದಾರೆ ಎಂದು ಹರಿಪ್ರಸಾದ ಹೇಳಿದ್ದಾರೆ.

ಕೋಮು ಬಣ್ಣ ಹಚ್ಚಿ ಯಾರನ್ನೋ ಖಳನಾಯಕ ಮಾಡುವುದು ಈಶ್ವರಪ್ಪ ಅವರಿಗೆ ಮತ್ತು ಬಿಜೆಪಿಯವರಿಗೆ ಹೊಸದಲ್ಲ. ಈ ಹಿಂದೆಯೂ ಶಿವಮೊಗ್ಗದಲ್ಲಿ ಕೊಲೆ ನಡೆದಿತ್ತು, ಆಗಲೂ ಮುಸ್ಲಿಂರ ಮೇಲೆ ಆಪಾದನೆ ಮಾಡಿದ್ದರು. ಆ ಬಳಿಕ ಹಿಂದೂಗಳು ತಪ್ಪಿತಸ್ಥರು ಅಂತಾ ಗೊತ್ತಾಯಿತು ಎಂದು ಈಶ್ವರಪ್ಪ ವಿರುದ್ಧ ವಾಗ್ದಾಳಿ
ಮಾಡಿದರು.

You might also like
Leave a comment