This is the title of the web page

ಈಶ್ವರಪ್ಪಗೆ ಬಿಜೆಪಿ ಅಧ್ಯಕ್ಷರಿಂದ ಛೀಮಾರಿ

ಹೊಸದಿಲ್ಲಿ, 22- ರಾಷ್ಟ್ರ ಧ್ವಜದ ಕುರಿತು ಸಚಿವ ಕೆ. ಎಸ್. ಈಶ್ವರಪ್ಪ ಹೇಳಿಕೆಯ ಕುರಿತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ವಿವಾದಾತ್ಮಕ ಹೇಳಿಕೆ ಬಗ್ಗೆ ಈಶ್ವರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡು ಛೀಮಾರಿ ಹಾಕಿದ್ದೇನೆ” ಎಂದು ಹೇಳಿದ್ದಾರೆ.

‘ಇಂಡಿಯಾ ಟುಡೆ’ ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ನಡ್ಡಾ ಅವರು ಈ ಬಗ್ಗೆ ಹೇಳಿದ್ದು, “ರಾಷ್ಟ್ರಧ್ವಜದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕರ್ನಾಟಕ ಸಚಿವ ಈಶ್ವರಪ್ಪನವರಿಗೆ ನಾನು ಕರೆ ಮಾಡಿದ್ದೆ ಹಾಗೂ ಈ ಬಗ್ಗೆ ಛೀಮಾರಿ ಹಾಕಿದ್ದೇನೆ” ಎಂದು ಹೇಳಿದರು.

ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ, “ಕೇಸರಿ ಧ್ವಜವು ಭವಿಷ್ಯದಲ್ಲಿ ರಾಷ್ಟ್ರಧ್ವಜವಾಗಬಹುದು” ಎಂದು ಹೇಳಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯಿಸುತ್ತಿದ್ದು, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಹೇಳಿಕೆಗಾಗಿ ದೇಶದ್ರೋಹದ ಆರೋಪದ ಹೊರಿಸಿ ಪ್ರಕರಣ ದಾಖಲಿಸಬೇಕು ಎಂದು ವಿಧಾನಸಭೆಯಲ್ಲಿಯೂ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿದೆ.

You might also like
Leave a comment