This is the title of the web page

ಜವಾದ್ ಚಂಡಮಾರುತ; ಪ್ರಧಾನಿ ಮೋದಿ ಸಭೆ

ಹೊಸದಿಲ್ಲಿ,2- ಭಾರತದ ಮೇಲೆ ಅಪ್ಪಳಿಸಲಿರುವ ಜವಾದ್ ಚಂಡಮಾರುತ ಪರಿಸ್ಥಿತಿಯನ್ನು ಎದುರಿಸಲು ರಾಜ್ಯಗಳು ಮತ್ತು ಕೇಂದ್ರ ಕೈಗೊಂಡಿರುವ ಸಿದ್ಧತೆಗಳ ಕುರಿತು ಪರಾಮರ್ಶಿಸಲು ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ಜನರ ಸುರಕ್ಷಿತ ಸ್ಥಳಾಂತರಕ್ಕೆ ಎಲ್ಲ ಸಾಧ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು ಜನರಿಗೆ ವಿದ್ಯುತ್, ದೂರಸಂಪರ್ಕ, ಆರೋಗ್ಯ, ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ಸೇವೆಗಳ ನಿರ್ವಹಣೆಯನ್ನು ಖಾತ್ರಿಪಡಿಸಬೇಕು ಮತ್ತು ಒಂದುವೇಳೆ ಅವುಗಳಿಗೆ ತೊಂದರೆ ಆದರೆ ತಕ್ಷಣವೇ ಅವುಗಳ ಪುನರ್ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಮಂತ್ರಿ ಅವರು ಅಧಿಕಾರಿಗಳಿಗೆಸೂಚಿಸಿದರು.

ಅಗತ್ಯ ಔಷಧಗಳ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ಕಂಟ್ರೋಲ್ ರೂಮ್ಗಳು ದಿನದ 24 ಗಂಟೆಗಳೂ ಸಹ ಕಾರ್ಯನಿರ್ವಹಿಸುವಂತಿರಬೇಕು ಎಂದು ಪ್ರಧಾನಿ ನಿರ್ದೇಶನ ನೀಡಿದರು.

ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದಿಂದಾಗಿ ಜವಾದ್ ಚಂಡಮಾರುತ ತೀವ್ರಗೊಳ್ಳುವ ನಿರೀಕ್ಷೆ ಇದೆ ಮತ್ತು ಅದು ಗಂಟೆ ಗೆಸುಮಾರು 100 ಕಿ.ಮೀ ವೇಗದಲ್ಲಿ ಚಲಿಸಿ, 2021ರ ಡಿಸೆಂಬರ್ 4ರಂದು ಶನಿವಾರ ಬೆಳಿಗ್ಗೆ ಉತ್ತರಆಂಧ್ರಪ್ರದೇಶ ಮತ್ತು ಒಡಿಶಾದ ಕರಾವಳಿ ತಲುಪುವ ಸಾಧ್ಯತೆ ಇದೆ ಎಂದು ಭಾರತೀಯಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ.

ಇದರಿಂದ ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳಲ್ಲಿ ಭಾರಿಮಳೆಯಾಗುವ ಸಾಧ್ಯತೆ ಇದೆ.

ಮರ ಕತ್ತರಿಸುವ ಯಂತ್ರಗಳು, ದೂರವಾಣಿಸಾಧನಗಳು ಮತ್ತು ಇತರೆ ಅಗತ್ಯ ಯಂತ್ರೋಪಕರಣಹೊಂದಿರುವ 29 ತಂಡಗಳನ್ನು ಎನ್ ಡಿಆರ್ ಎಫ್ಆಯಕಟ್ಟಿನ ಜಾಗಕ್ಕೆ ನಿಯೋಜಿಸಿದೆ ಮತ್ತು 33ತಂಡಗಳನ್ನು ಸರ್ವ ಸನ್ನದ್ಧವಾಗಿ ಇಡಲಾಗಿದೆ.

ಪರಿಹಾರ, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳಿಗೆ ಹೆಲಿಕಾಪ್ಟರ್ ಮತ್ತು ಹಡಗುಗಳನ್ನು ಭಾರತೀಯ ಕರಾವಳಿ ಪಡೆ ಮತ್ತು ನೌಕಾಪಡೆ ನಿಯೋಜಿಸಿವೆ. ಸೇನೆಯ ವಾಯು ಪಡೆಮತ್ತು ಎಂಜಿನಿಯರ್ ಕಾರ್ಯಪಡೆ ಘಟಕಗಳು ದೋಣಿಗಳು ಮತ್ತು ರಕ್ಷಣಾ ಸಾಮಗ್ರಿಗಳೊಂದಿಗೆ ನಿಯೋಜನೆಗೆ ಸಜ್ಜಾಗಿವೆ. ಕರಾವಳಿಯಾದ್ಯಂತ ಆಯಕಟ್ಟಿನ ಜಾಗಗಳಲ್ಲಿವಿಪತ್ತು ಪರಿಹಾರ ತಂಡಗಳು ಮತ್ತು ವೈದ್ಯಕೀಯತಂಡಗಳನ್ನು ಸನ್ನದ್ಧವಾಗಿಡಲಾಗಿದೆ.

ಎನ್ ಡಿಆರ್ ಎಫ್, ರಾಜ್ಯದ ಸಂಸ್ಥೆಗಳಿಗೆ ಸೂಕ್ಷ್ಮಪ್ರದೇಶಗಳಿಂದ ಜನರನ್ನು ಸ್ಥಳಾಂತರ ಮಾಡಲುಸಿದ್ಧತೆಗೆ ಸಹಾಯ ಮಾಡುತ್ತಿದೆ ಮತ್ತು ಚಂಡಮಾರುತದ ಸ್ಥಿತಿಯನ್ನು ಹೇಗೆ ಎದುರಿಸಬೇಕು ಎಂಬ ಕುರಿತು ನಿರಂತರವಾಗಿ ಸಮುದಾಯ ಜಾಗೃತಿ ಅಭಿಯಾನಗಳನ್ನು ನಡೆಸುತ್ತಿದೆ.

You might also like
Leave a comment