This is the title of the web page

ನೂತನ ಲೋಕಾಯುಕ್ತರಾಗಿ ಬಿ.ಎಸ್. ಪಾಟೀಲ ಅಧಿಕಾರ ಸ್ವೀಕಾರ 

ಬೆಂಗಳೂರು: ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಗುರುವಾರ ರಾಜಭವನದಲ್ಲಿ ನಡೆದ ಸರಳ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ದೇವರ ಹೆಸರಲ್ಲಿ ಲೋಕಾಯುಕ್ತರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರಿಂದ ತೆರವಾದ ಸ್ಥಾನಕ್ಕೆ ಕಳೆದ 5 ತಿಂಗಳಿಂದ ಲೋಕಾಯುಕ್ತ ಹುದ್ದೆ ಖಾಲಿಯಿತ್ತು.ಇದೀಗ 8ನೇ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಬಿ.ಎಸ್. ಪಾಟೀಲ್ ಅಧಿಕಾರ ಸ್ವೀಕರಿಸಿದ್ದಾರೆ. ದೇವರ ಹೆಸರಲ್ಲಿ ಲೋಕಾಯುಕ್ತರು ಪ್ರಮಾಣವಚನ ಸ್ವೀಕರಿಸಿದ್ದಾರೆ.

 

You might also like
Leave a comment