Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

Entertainment News

‘ಕಾಂತಾರಾ’ ದಾಖಲೆಗಳ ಸರಮಾಲೆ


ಬೆಂಗಳೂರು, ೩- ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಸಿನಿಮಾ ಭಾರತದೆಲ್ಲೆಡೆ ಭರ್ಜರಿ ಯಶಸ್ಸು ಸಾಧಿಸಿದ್ದು ಒಂದರ ಮೇಲೊಂದು ದಾಖಲೆ ಬರೆಯುತ್ತಿದೆ.

ಈಗಾಗಲೇ ಕಲೆಕ್ಷನ್ ನಲ್ಲಿ ಕೆಜಿಎಫ್ ಮೊದಲನೆಯ ಭಾಗವನ್ನು ಇಂದಿಕ್ಕಿದ್ದು,ಕಾಂತಾರ ಚಿತ್ರ ಇದೀಗ 300 ಕೋಟಿ ₹ ಗಳಿಕೆ ಮಾಡುವ ಮೂಲಕ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿದೆ. ಅತಿ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡದ ಎರಡನೇ ಸಿನಿಮಾ ಇದಾಗಿದೆ.

ಸೂಪರ ಸ್ಟಾರ ರಜನಿಕಾಂತ ಸೇರಿದಂತೆ ಸಾಕಷ್ಟು ಸಿನಿಮಾ ಕಲಾವಿದರು ಈ ಚಿತ್ರಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದು, ಎಲ್ಲಾ ಭಾಷೆಯ ಸಿನಿ ಪ್ರೇಕ್ಷಕರ ಗಮನ ಸೆಳೆದಿದೆ. ಹೊಂಬಾಳೆ ಫಿಲಂಸ್ ಬ್ಯಾನರ್ ನಡಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿರುವ ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸಪ್ತಮಿ ಗೌಡ, ಕಿಶೋರ, ಪ್ರಮೋದ ಶೆಟ್ಟಿ, ಅಚ್ಯುತ ಕುಮಾರ, ಮಾನಸಿ ಸುಧೀರ, ಪ್ರಕಾಶ, ಸ್ವರಾಜ ಶೆಟ್ಟಿ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅಜನೀಶ ಲೋಕನಾಥ ಅವರ ಸಂಗೀತ ಈ ಚಿತ್ರಕ್ಕಿದೆ.


Leave a Reply