This is the title of the web page

ಶೀಘ್ರವೇ ಪುನೀತ ರಾಜಕುಮಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರು, 17- ಖ್ಯಾತ ನಟ, ದಿವಂಗತ ಪುನೀತ ರಾಜಕುಮಾರ ಅವರಿಗೆ ಸದ್ಯದಲ್ಲೇ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಆರ್ ಟಿ ನಗರದ ತಮ್ಮ ನಿವಾಸದ ಬಳಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಇಂದು ನಮ್ಮೆಲ್ಲರ ಅಚ್ಚುಮೆಚ್ಚಿನ ಪುನೀತ ರಾಜಕುಮಾರ ಅವರ 47ನೇ ಹುಟ್ಟುಹಬ್ಬ. ಅವರ ಬದುಕು ನಮಗೆ ಸ್ಪೂರ್ತಿ. ಅವರು ಅಂಗಾಂಗ ದಾನ ಮಾಡಿರುವುದು ನಮ್ಮೆಲ್ಲರಿಗೂ ಪ್ರೇರಣೆ ಎಂದರು.

ಇಂದು ಅವರ ಸಿನೆಮಾ ಜೇಮ್ಸ ಬಿಡುಗಡೆಯಾಗುತ್ತಿದೆ. ಸಿನಿಮಾ ಯಶಸ್ವಿಯಾಗಲಿ ಎಂದು ಶುಭಾಶಯ ಕೋರುವುದಾಗಿ ಮುಖ್ಯಮಂತ್ರಿ ಹೇಳಿದರು.

ಈಗಾಗಲೇ ರಾಜ್ಯ ಸರ್ಕಾರ ಪುನೀತ ರಾಜಕುಮಾರ ಅವರಿಗೆ ಕರ್ನಾಟಕ ರತ್ನ ಘೋಷಣೆ ಮಾಡಿದೆ. ಸದ್ಯದಲ್ಲೇ ಕುಟುಂಬದ ಜೊತೆಗೆ ಚರ್ಚಿಸಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

You might also like
Leave a comment