ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಎಂದು ಬದಲಾವಣೆ ಮಾಡಲಾಗಿದ್ದು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ ಸಹ ಅಧಿಸೂಚನೆ ಪ್ರಕಟಿಸಿದೆ.
ಮಂಡಳಿ ನಿರ್ದೇಶಕರು ಎಚ್. ಎನ್. ಗೋಪಾಲಕೃಷ್ಣ ಈ ಕುರಿತು ಆದೇಶವನ್ನು ಹೊರಡಿಸಿದ್ದು, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಎಂದು ಬದಲಾವಣೆ ಮಾಡಲಾಗಿದೆ, ಕಡತ, ಮೊಹರು, ಪತ್ರ ವ್ಯವಹಾರದಲ್ಲಿಯೂ ಹೊಸ ಹೆಸರು ಬಳಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.