This is the title of the web page

ದೇಶದ ದೊಡ್ಡ ಪಕ್ಷ ಗೂಂಡಾಗಿರಿ ನಡೆಸಿದರೆ ತಪ್ಪು ಸಂದೇಶ ಹೋಗುತ್ತದೆ

ಹೊಸದಿಲ್ಲಿ, ೩೧-: ದೇಶದ ಅತಿ ದೊಡ್ಡ ಪಕ್ಷವೇ ಗೂಂಡಾಗಿರಿ ನಡೆಸಿದರೆ ತಪ್ಪು ಸಂದೇಶ ರವಾನೆಯಾಗುತ್ತದೆ ಮತ್ತು ಅಂತಹ ಸನ್ನಿವೇಶದಲ್ಲಿ ದೇಶವು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

‘ದಿ ಕಾಶ್ಮೀರ ಫೈಲ್ಸ್’ ಚಿತ್ರದ ಕುರಿತು ಕೇಜ್ರಿವಾಲ್ ಹೇಳಿಕೆ ನೀಡಿದ ಬಗ್ಗೆ ರಾಷ್ಟ್ರದ ರಾಜಧಾನಿ ದೆಹಲಿಯ ಮುಖ್ಯಮಂತ್ರಿಗಳ ನಿವಾಸದ ಮೇಲೆ ಪೋಲೀಸರ ಸಮ್ಮುಖದಲ್ಲೇ ಬಿಜೆಪಿಯ ಯುವ ಘಟಕದ ಸದಸ್ಯರು ನಿನ್ನೆ ದಾಳಿ ನಡೆಸಿದ್ದರು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಜ್ರಿವಾಲ್ ಅವರು, ಅರವಿಂದ ಕೇಜ್ರಿವಾಲ್ ಮುಖ್ಯವಲ್ಲ. ಆದರೆ, ದೇಶ ಮುಖ್ಯ. ನಾನು ರಾಷ್ಟ್ರಕ್ಕಾಗಿ ನನ್ನ ಪ್ರಾಣವನ್ನೇ ನೀಡಬಲ್ಲೆ. ಇಂತಹ ಗೂಂಡಾಗಿರಿಯಿಂದ ಭಾರತ ದೇಶ ಪ್ರಗತಿ ಸಾಧಿಸಲು ಆಗದು ಎಂದು ಹೇಳಿದ್ದಾರೆ.

ಕೇಂದ್ರದಲ್ಲಿ ಅಧಿಕಾರದಲ್ಲಿರುವ ದೇಶದ ಅತಿದೊಡ್ಡ ಪಕ್ಷವು ಇಂತಹ ಗೂಂಡಾಗಿರಿಯನ್ನು ಮಾಡಿದರೆ ಅದು ಜನರಲ್ಲಿ ಕೆಟ್ಟ ಸಂದೇಶವನ್ನು ರವಾನಿಸುತ್ತದೆ, ಇದೇ ಸರಿಯಾದ ಮಾರ್ಗವೆಂದು ಜನರು ಭಾವಿಸುತ್ತಾರೆ ಎಂದು ಅವರು ತಿಳಿಸಿದ್ದಾರೆ.

ದಾಳಿ ಕುರಿತು ನಿನ್ನೆ ಪ್ರತಿಕ್ರಿಯೆ ನೀಡಿದ್ದ ಉಪಮುಖ್ಯಮಂತ್ರಿ ಮನೀಶ ಸಿಸೋಡಿಯಾ ಅವರು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದರು.

ಚುನಾವಣೆಯಲ್ಲಿ ಬಿಜೆಪಿ ಆಮ್ ಆದ್ಮಿ ಪಕ್ಷವನ್ನು ಸೋಲಿಸಲು ಸಾಧ್ಯವಾಗದ ಕಾರಣ ಕೇಜ್ರಿವಾಲ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದೆ ಎಂದು ಆರೋಪಿಸಿದ್ದರು.

You might also like
Leave a comment