Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

National News

ಖರ್ಗೆ ಕಾಂಗ್ರೆಸ್ ಪಕ್ಷದ ನೂತನ‌ ಅಧ್ಯಕ್ಷ


ಹೊಸದಿಲ್ಲಿ : ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು 7,897 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿಯಾದ ಶಶಿ ಥರೂರ್ ಅವರು ಕೇವಲ 1072 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಅವರ ಪ್ರತಿಸ್ಪರ್ಧಿ ಶಶಿ ಥರೂರ್ ಅವರು ಗೆಲುವಿಗಾಗಿ ಖರ್ಗೆ ಅವರನ್ನು ಅಭಿನಂದಿಸಿದ್ದಾರೆ.

ಖರ್ಗೆ ಅವರು ಒಟ್ಟು 9,385 ಮತಗಳ ಪೈಕಿ 7,897 ಮತಗಳನ್ನು ಪಡೆದುಕೊಂಡಿದ್ದಾರೆ, 2019 ರ ಲೋಕಸಭಾ ಚುನಾವಣೆಯ ನಂತರ ರಾಹುಲ್ ಗಾಂಧಿ ಅವರು ರಾಜೀನಾಮೆ ನೀಡಿದಾಗಿನಿಂದ ಈ ಹುದ್ದೆಯನ್ನು ಅಲಂಕರಿಸುತ್ತಿರುವ ಕಾಂಗ್ರೆಸ್ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಸ್ಥಾನವನ್ನು ಖರ್ಗೆ ತುಂಬಲಿದ್ದಾರೆ.


A B Dharwadkar
the authorA B Dharwadkar

Leave a Reply