ರಾಯಬಾಗ, 24 : ರಾಯಬಾಗ ತಾಲೂಕಿನಲ್ಲಿ 19 ವರ್ಷದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ನಾಪತ್ತೆಯಾಗಿದ್ದು, ಆಕೆಯ ಕುಟುಂಬಸ್ಥರು ಇದು ಅಪಹರಣ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಯುವತಿ ನಾಪತ್ತೆಯ ಹಿಂದೆ ಮದುವೆಯಾಗಿ ಮೂವರು ಮಕ್ಕಳನ್ನು ಹೊಂದಿರುವ ಪಕ್ಕದ ಮನೆಯ ವ್ಯಕ್ತಿಯ ಕೈವಾಡವಿದೆ ಎಂದು ಕುಟುಂಬಸ್ಥರು ಬಲವಾಗಿ ಶಂಕಿಸಿದ್ದಾರೆ.
ಕಾಲೇಜಿಗೆ ಹೋಗಿಬರುವುದಾಗಿ ಹೇಳಿ ನಾಪತ್ತೆ:
19 ವರುಷದ ಯುವತಿ ಕಾಲೇಜಿಗೆ ಹೋಗಿದ್ದವರು ಮತ್ತೆ ಮನೆಗೆ ವಾಪಸ್ ಬಾರದ ಕಾರಣ ಆತಂಕಗೊಂಡ ಕುಟುಂಬಸ್ಥರು ತೀವ್ರ ಹುಡುಕಾಟ ನಡೆಸಿದ್ದಾರೆ. ಪಕ್ಕದ ಮನೆಯವನಾದ ಸುರೇಶ್ ಹುಲ್ಲೇನ್ನವರ್ ಎಂಬಾತನ ಮೇಲೆ ಕುಟುಂಬಸ್ಥರು ನೇರವಾಗಿ ಆರೋಪ ಮಾಡಿದ್ದು, ಆತನೇ ಯುವತಿಯನ್ನು ಅಪಹರಿಸಿದ್ದಾನೆ ಎಂದು ಆರೋಪಿಸಿ ರಾಯಭಾಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರಿಂದ ಶೋಧ:
ಈ ದೂರಿನ ಬೆನ್ನಲ್ಲೇ, ಮದುವೆಯಾಗಿ ಮಕ್ಕಳಿರುವ ಪುರುಷನೊಂದಿಗೆ ಯುವತಿ ಪರಾರಿಯಾಗಿರುವ ಸಾಧ್ಯತೆಗಳ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ರಾಯಭಾಗ ಪೊಲೀಸ್ ಠಾಣೆಯ ಅಧಿಕಾರಿಗಳು ಸುರೇಶ ಹುಲ್ಲೆನ್ನವರ ಮತ್ತು ಕಾಣೆಯಾದ ಯುವತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

