Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಕಿತ್ತೂರ ಉತ್ಸವ ಮುಂದೂಡಿಕೆ


ಬೆಳಗಾವಿ : ಇಂದಿನಿಂದ ಮೂರು ದಿನಗಳ ಕಾಲ ನಡೆಯಬೇಕಿದ್ದ ಕಿತ್ತೂರು ಉತ್ಸವವನ್ನು ಸೋಮವಾರ ಅಕ್ಟೋಬರ್ 24 ಕ್ಕೆ ಮುಂದೂಡಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

ಇಂದಿನಿಂದ ಚನ್ನಮ್ಮನ್ನ ಕಿತ್ತೂರಿನಲ್ಲಿ ಮೂರು ದಿನಗಳ ಕಾಲ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಕಿತ್ತೂರು ಉತ್ಸವಕ್ಕೆ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಸವದತ್ತಿ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ವಿಧಿವಶರಾದ ಹಿನ್ನೆಲೆಯಲ್ಲಿ ಕಿತ್ತೂರು ಉತ್ಸವ ಆಚರಣೆ ಕುರಿತು ಜಿಲ್ಲಾಡಳಿತ ಒಂದು ದಿನ ಮುಂದೂಡಿಕೆ ಮಾಡಲಾಗಿದೆ.

ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಕಿತ್ತೂರು ಉತ್ಸವಕ್ಕೆ ಸರ್ಕಾರ ನಿರ್ಧಾರ ಮಾಡಿತ್ತು. ಸಂಜೆ ಉತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿಯಾಗಬೇಕಿತ್ತು.

ಈಗಾಗಲೇ ಜಿಲ್ಲಾಡಳಿತ ಕಿತ್ತೂರು ಉತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಸವದತ್ತಿ ಶಾಸಕ ಆನಂದ ಮಾಮನಿ ವಿಧಿವಶ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.


A B Dharwadkar
the authorA B Dharwadkar

Leave a Reply