ಬೆಳಗಾವಿ : ಬಸ್ಸಿನ ಕಿಟಕಿ ಸೀಟಗಾಗಿ ಸಲುವಾಗಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದು ವಿದ್ಯಾರ್ಥಿಯೋರ್ವನಿಗೆ ಚಾಕು ಇರಿದು ಪರಾರಿಯಾದ ಘಟನೆ ಬುಧವಾರ ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಪಂತ ಬಾಳೇಕುಂದ್ರಿ ಗ್ರಾಮದ ಮಾಂಜ ಸನದಿ ಚಾಕು ಇರಿತಕ್ಕೆ ಒಳಗಾದ ವಿದ್ಯಾರ್ಥಿಯಾಗಿದ್ದಾನೆ. ಬಸ್ ಕಿಟಕಿ ಸೀಟ್ ಸಲುವಾಗಿ ನಡೆದ ಗಲಾಟೆಯಲ್ಲಿ ಚಾಕು ಹಾಕಿದ ಅಪರಿಚಿತ ಯುವಕರು ಪರಾರಿಯಾಗಿದ್ದಾರೆ.
ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ ಮಾಂಜನನ್ನು ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಜಿಲ್ಲಾಸ್ಪತ್ರೆಗೆ ಡಿಸಿಪಿ ರೋಹನ್ ಜಗದೀಶ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು. ಮಾರ್ಕೆಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.