This is the title of the web page

ಲತಾ ಮಂಗೇಶ್ಕರಗೆ ಕೊರೋನಾ; ಆಸ್ಪತ್ರೆಗೆ ದಾಖಲು

ಮುಂಬೈ, 11- ಹಲವಾರು ತಿಂಗಳುಗಳಿಂದ ಸಾರ್ವಜನಿಕರಿಂದ ದೂರವುಳಿದು ಮನೆಯಲ್ಲೇ ಇರುತ್ತಿದ್ದ ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಕೊರೋನಾ ಸೋಂಕಿಗೊಳಗಾಗಿದ್ದು ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

92 ವರುಷದ ಅವರನ್ನು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇರಿಸಲಾಗಿದ್ದು ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಎದೆಗೆ ಸಂಬಂಧಿಸಿದಂತೆ ನವೆಂಬರ್ 2019 ರಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಭಾರತೀಯ ಚಿತ್ರರಂಗದ ಶ್ರೇಷ್ಠ ಹಿನ್ನೆಲೆ ಗಾಯಕಿಯರಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿರುವ ಲತಾ ಮಂಗೇಶ್ಕರ್ ಅವರಿಗೆ 2001 ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ನೀಡಲಾಗಿತ್ತು.

You might also like
Leave a comment