ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ

A B Dharwadkar
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ

ಹಾವೇರಿಡಿ.21 (ಕರ್ನಾಟಕ ವಾರ್ತೆ): ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಸ್ಥಾನ ಸಮಿತಿ ಅಧ್ಯಕ್ಷ ಎಂ.ಎಂ.ಮೈದೂರ ಅವರು ರವಿವಾರ ಹಾವೇರಿ ನಗರದ ಜಿ.ಪಿ.ರೋಟರಿ ಪ್ರಾಥಮಿಕ ಶಾಲೆಯಲ್ಲಿ ಸಾಂಕೇತಿಕವಾಗಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.

ಡಾ. ಎಮ್.ಜಯಾನಂದ ಅವರು ಮಾತನಾಡಿ, ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿರುವುದರಿಂದ, ಕರ್ನಾಟಕದಲ್ಲಿ ಪೋಲಿಯೋ ಪ್ರಕರಣಗಳು ಕಂಡುಬಂದಿರುವುದಿಲ್ಲ, ಆರೋಗ್ಯ ಇಲಾಖೆಯು ಮಕ್ಕಳ ಅಂಗವಿಕಲತೆಯನ್ನು ತಡೆಗಟ್ಟುವಿಕೆಯಲ್ಲಿ ಯಶಸ್ವಿಯಾಗಿರುತ್ತದೆ.

 

ಹಾವೇರಿ ಜಿಲ್ಲೆಯಲ್ಲಿ ಒಟ್ಟು 05 ವರ್ಷದೊಳಗಿನ 148,263 ಮಕ್ಕಳಿಗೆ ಲಸಿಕೆ ಹಾಕುವ ಗುರಿಯನ್ನು ಹಾಕಿಕೊಂಡಿದ್ದು, 1,001 ಪೋಲಿಯೋ ಬೂತ್‌ಗಳಲ್ಲಿ 2,002 ಜನ ಲಸಿಕೆ ಹಾಕಲು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮ ದೇಶದಲ್ಲಿ 1995 ರಿಂದ ಪೋಲಿಯೋ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಚಾಲನೆಗೊಳಿಸಿದ್ದು, 2011 ರಲ್ಲಿ ನಮ್ಮ ದೇಶದಲ್ಲಿ ಪೋಲಿಯೋ ನಿರ್ಮೂಲನೆಯಾಗಿರುತ್ತದೆ. ಆದರೆ ನಮ್ಮ ಅಕ್ಕಪಕ್ಕದ ದೇಶಗಳಲ್ಲಿ ಪ್ರಕರಣಗಳು ಕಂಡುಬಂದ ಹಿನ್ನಲೆಯಲ್ಲಿ ನಮ್ಮ ದೇಶದಲ್ಲಿಯೂ ಸಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ. ಈ ಬಾರಿ ವಲಸಿಗರ ಮಕ್ಕಳನ್ನು ಪತ್ತೆ ಹಚ್ಚಿ ಪೋಲಿಯೋ ಹನಿ ಹಾಕಲು ಹೆಚ್ಚು ಒತ್ತು ನೀಡಲು ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.

 

ರೋಟರಿ ಕ್ಲಬ್‌ನ ಅಸಿಸ್ಟಂಟ್ ಗವರ್ನರ್ ದಯಾನಂದ ಯಡ್ರಾಮಿ, ಕಾಶೀನಾಥ ಅರಾವತ್, ಜಿಲ್ಲಾ ರೋಗವಾಹಕ ಮತ್ತು ಆಶ್ರಿತ ರೋಗಗಳ ನಿಯಂತ್ರಣಾಧಿರಿ ಡಾ. ಸರೀತಾ, ತಾಲೂಕಾ ಆರೋಗ್ಯಾಧಿಕಾರಿ ಪ್ರಭಾಕರ ಎಸ್. ಕುಂದೂರ, ರೋಟರಿ ಕ್ಲಬ್‌ನ ಪ್ರದಾಧಿಕಾರಿಗಳಾದ ಗಣೇಶ ಮುಷ್ಟಿ, ಬಸವರಾಜ ಮಾಸೂರ, ಸುರೇಶ ಕಡಕೋಳ, ಹೇಮಂತ ಅನೂರಶಟ, ಆರ್.ಸಿ.ಎಚ್.ಕಚೇರಿಯ ಅಶೋಕ ಸಾವಂತ, ಅರೀಫ ಯಲಿಗಾರ, ಎ.ಪಿ.ಪಾಟೀಲ್ ಇತರರು ಉಪಸ್ಥಿತರಿದ್ದರು. ರೋಟರಿ ಕ್ಲಬ್‌ನ ಎಸ್.ಸಿ.ಹಿರೇಮಠ ಕಾರ್ಯಕ್ರಮ ನಿರೂಪಿಸಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.