This is the title of the web page

ಗೋಕಾಕದಲ್ಲಿ ನಾಳೆ ಕಾನೂನು ಅರಿವು-ನೆರವು ಕಾರ್ಯಕ್ರಮ

ಗೋಕಾಕ, ಮಾ.೨೬- ಬೆಳಗಾವಿಯ ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಆಯೋಗ ಜಿಲ್ಲಾ ಘಟಕ, ಗೋಕಾಕ ತಾಲೂಕು ಕಾನೂನು ಸೇವೆಗಳ ಸಮಿತಿ, ಗೋಕಾಕ ನ್ಯಾಯವಾದಿಗಳ ಸಂಘ ಹಾಗೂ ಗೋಕಾಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗಳ ವತಿಯಿಂದ ನಗರದಲ್ಲಿ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಕುರಿತು ಕಾನೂನು ಅರಿವು – ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ.

ದಿ.೨೭ ರಂದು ಮುಂ. ೧೧ ಗಂಟೆಗೆ ನಗರದ ಕೆಎಲ್‌ಇ ಮಹಾದೇವಪ್ಪ ಮುನವಳ್ಳಿ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶೂನ್ಯ ಸಂಪಾದನ ಮಠದ ಶ್ರೀ ಮನಿಪ್ರ ಶ್ರೀ ಮುರುಘರಾಜೇಂದ್ರ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ ಹಾಗೂ ಗೋಕಾಕ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಕೆ.ಎಂ. ಶಂಕರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಗೋಕಾಕ ಕಾರ್ಮಿಕ ಧುರೀಣರಾದ ಅಂಬಿರಾವ ಪಾಟೀಲ ಗೌರವಾಧ್ಯಕ್ಷರಾಗಿ ಪಾಲ್ಗೊಳ್ಳಲಿದ್ದು, ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಆಯೋಗ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರಾದ ಅಶೋಕ ಕೆಂಗಣ್ಣವರ ಅಧ್ಯಕ್ಷತೆ ವಹಿಸಲಿದ್ದಾರೆ.

ಆರಕ್ಷಕ ಉಪ ಅಧೀಕ್ಷಕ ಮನೋಜಕುಮಾರ ನಾಯಿಕ, ತಾಲೂಕಾ ದಂಡಾಧಿಕಾರಿ ಪ್ರಕಾಶ ಬಸವರಾಜ ಹೊಳೆಪ್ಪಗೋಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಜಯಶ್ರೀ ಶೀಲವಂತರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಆಯೋಗ ಬೆಳಗಾವಿ ಜಿಲ್ಲೆಯ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಸಂಗೀತಾ ಬನ್ನೂರ, ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಆಯೋಗ ಬೆಳಗಾವಿ ಜಿಲ್ಲಾ ಘಟಕದ ಉಪಾಧ್ಯಕ್ಷ ಮಹಾಂತೇಶ ತಾಂವಶಿ, ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಆಯೋಗ ಗೋಕಾಕ ತಾಲೂಕಿನ ಅಧ್ಯಕ್ಷರಾದ ಸಿ.ಡಿ. ಹುಕ್ಕೇರಿ, ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಆಯೋಗ ಗೋಕಾಕ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಮಂಗಲಾ ಜಕಾತಿ, ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಆಯೋಗ ಬೆಳಗಾವಿ ಜಿಲ್ಲೆ ಮಹಿಳಾ ಘಟಕದ ಕಾರ್ಯಾಧ್ಯಕ್ಷೆ ವೈಶಾಲಿ ಭರಭರಿ ಮುಂತಾದ ಗಣ್ಯರು ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

You might also like
Leave a comment