ಬೆಳಗಾವಿ : ಸಾಮಾಜಿಕ ಜಾಲತಾಣಗಳಲ್ಲಿ ವಿವಾದ ಸೃಷ್ಟಿಸುವ ಪೋಸ್ಟ ಹಾಕಿದ್ದಕ್ಕೆ ನೆರೆಯ ಕೊಲ್ಲಾಪುರ ನಗರ ಉದ್ವಿಗ್ನಗೊಂಡಿದ್ದು ಇಂತಹ ಪ್ರಕರಣಗಳು ಬೆಳಗಾವಿಯಲ್ಲಿ ನಡೆಯಕೂಡದು. ಹಾಗಾಗಿ ವಾಟ್ಸಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್ದಲ್ಲಿ ವಿವಾದಿತ ಪೋಸ್ಟ್, ಸ್ಟೇಟಸ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಪೊಲೀಸ್ ವರಿಷ್ಠ ಸಂಜೀವ ಪಾಟೀಲ ಎಚ್ಚರಿಕೆ ನೀಡಿದ್ದಾರೆ.
ಜಾಲತಾಣಗಳ ಪೋಸ್ಟ ಕುರಿತು ಪೊಲೀಸರು ಗಮನ ಹರಿಸುತ್ತಿದ್ದಾರೆ. ಎಚ್ಚರಿಕೆ ಉಲಂಘಿಸಿದರೆ ಐಪಿಸಿ ಕಲಂ 153ಎ, 295 ಎ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಿಪ್ಪಾಣಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತೀವ್ರ ನಿಗಾ ವಹಿಸುವಂತೆ ಸೂಚನೆ ನೀಡಿದ್ದಾರೆ.