ಬೆಂಗಳೂರು : ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ ಎಂದು ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ ತಾಳಿಕಟ್ಟೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದೆ.
8 ಅಂಶಗಳನ್ನು ಉಲ್ಲೇಖ ಮಾಡಿ ಪತ್ರ ಬರೆಯಲಾಗಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದು ಮೂರನೇ ಬಾರಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತಿದ್ದೇನೆ. ಶಿಕ್ಷಣ ಸಚಿವ ಅವರನ್ನು ವಜಾಗೊಳಿಸದಿದ್ದರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಶೋಕಿ ಮಾಡೋರನ್ನು ಶಿಕ್ಷಣ ಸಚಿವರನ್ನಾಗಿ ಮಾಡಿದ್ದಾರೆ ಎಂದು ಬಿ.ಸಿ.ನಾಗೇಶ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.