ಬೆಳಗಾವಿ: ರಾಜ್ಯದಲ್ಲಿ ವಿವಿಧ ಕಡೆ ಬೆಳ್ಳಂ ಬೆಳಿಗ್ಗೆ ಭ್ರಷ್ಟರ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಬೆಳಗಾವಿ, ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ದಾಳಿ ವೇಳೆ ಸಿಕ್ಕ ಸಂಪತ್ತು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿಯ ರಾಮತೀರ್ಥ ನಗರದಲ್ಲಿ ಮನೆ ಹೊಂದಿರುವ ಮೇಲೆ ಕರ್ನಾಟಕ ನೀರಾವರಿ ನಿಗಮದ ಮಲಪ್ರಭಾ ಯೋಜನಾ ವಲಯದ ಮುಖ್ಯ ಇಂಜಿನೀಯರ ಅಶೋಕ ವಸನದ ಅವರ ಮನೆಯ ಮೇಲಿನ ದಾಳಿಯಲ್ಲಿ ವಜ್ರಾಭರಣ, ಚಿನ್ನಾಭರಣ, ಬೆಳ್ಳಿ ಒಂದೂವರೆ ಲಕ್ಷ ನಗದು ಪತ್ತೆಯಾಗಿದೆ ಎಂದು ಗೊತ್ತಾಗಿದೆ.
ಧಾರವಾಡದ ಅವರ ಕಚೇರಿ ಮೇಲೂ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಧಾರವಾಡ ಲೋಕಾಯುಕ್ತ ಅಧಿಕಾರಿಗಳಿಂದ ಬೆಳಗಾವಿಯಲ್ಲಿ ಶೋಧಕಾರ್ಯ ನಡೆಸಲಾಗಿದೆ.