Live Stream

December 2022
W T F S S M T
 123456
78910111213
14151617181920
21222324252627
28293031  

| Latest Version 8.2.9 |

State News

ಒಂದು ವರ್ಷದಲ್ಲಿ ರಾಜ್ಯಕ್ಕೆ ಮಹದಾಯಿ ನೀರು : ಕೇಂದ್ರ ಸಚಿವ ಜೋಶಿ 

joshi

ಹುಬ್ಬಳ್ಳಿ : ಒಂದು ವರ್ಷದಲ್ಲಿ ರಾಜ್ಯಕ್ಕೆ ಮಹದಾಯಿ ನೀರು ಬರಲಿದೆ. ಮಹದಾಯಿ ಯೋಜನೆಯ ಕೆಲಸಗಳು ನಡೆಯುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆ ಕೆಲಸ ನಡೆಯುತ್ತಿದೆ. ಹೆಚ್ಚು ಅರಣ್ಯ ನಾಶವಾಗದಂತೆ ತಂತ್ರಜ್ಞಾನ ಬಳಸಿ ಕೆಲಸ ಮಾಡಲಾಗುತ್ತಿದೆ. ಸಚಿವ ಗೋವಿಂದ ಕಾರಜೋಳ ಮುತುವರ್ಜಿ ವಹಿಸಿ ಕೆಲಸ ಮಾಡುತ್ತಿದ್ದಾರೆ. ಕೆಲವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದರು.

ಇನ್ನು ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಪ್ರಹ್ಲಾದ್ ಜೋಶಿ, ದೀಪಾವಳಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಶೀಘ್ರವೇ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳುವುದಾಗಿ ಹೇಳಿದ್ದಾರೆ. ಹೈಕಮಾಂಡ್ ಬಳಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.


A B Dharwadkar
the authorA B Dharwadkar

Leave a Reply