This is the title of the web page

ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ : ಆರೋಪಿ ವಶಕ್ಕೆ 

 

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಬಂದಿಳಿದ ಪ್ರಯಾಣಿಕನನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ಅಕ್ರಮ ಚಿನ್ನ ವಶಪಡಿಸಿಕೊಂಡಿದ್ದಾರೆ.

364 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ವಶ ಪಡಿಸಿಕೊಳ್ಳಲಾಗಿದ್ದು, ಇದರ ಬೆಲೆ 18,95,400 ರೂಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳೆಯರ ಒಳ ಉಡುಪಿನಲ್ಲಿ ರಟ್ಟಿನ ಪೆಟ್ಟಿಗೆಯಲ್ಲಿ ಮರೆ ಮಾಚಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

You might also like
Leave a comment