ಆಧುನಿಕ ಭಾರತದ ಆರ್ಥಿಕತೆ ರೂವಾರಿ ಮನಮೋಹನ್ ಸಿಂಗ್ ನಿಧನ

A B Dharwadkar
ಆಧುನಿಕ ಭಾರತದ ಆರ್ಥಿಕತೆ ರೂವಾರಿ ಮನಮೋಹನ್ ಸಿಂಗ್ ನಿಧನ

ಹೊಸದಿಲ್ಲಿ: ಆರ್ಥಿಕತೆಯಲ್ಲಿ ಭಾರತವನ್ನು ಬಲಿಷ್ಠ ರಾಷ್ಟ್ರಗಳ ಸಮಾನ ತಂದಿದ್ದ, ಆಧುನಿಕ ಭಾರತದ ಆರ್ಥಿಕತೆಯ ರೂವಾರಿ, ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ಗುರುವಾರ ಸಂಜೆ ನಿಧನರಾದರು.

ದೆಹಲಿಯ ಏಮ್ಸ್  ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು.

ಒಂದು ಸಮಯದಲ್ಲಿ ತೀವ್ರ ಸಂಕಷ್ಟದಲ್ಲಿದ್ದ ಭಾರತದ ಆರ್ಥಿಕತೆಯನ್ನು ವಿಶ್ವದ ಮುಂಚೂಣಿ ರಾಷ್ಟ್ರಗಳ ಸಾಲಿನಲ್ಲಿ ತಂದು ನಿಲ್ಲಿಸಿದ್ದ ಅವರು, 2004 ರಿಂದ 2014 ರವರೆಗೆ ಭಾರತದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು.

ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. ಅವರು ಈ ಹಿಂದೆ 1998 ರಿಂದ 2004 ರವರೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಹೊಂದಿದ್ದರು. ಸಿಂಗ್ ಅವರು ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು ಮತ್ತು 2009 ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸಿದ್ದರು.

1991 ರಲ್ಲಿ ಅವರು ರಾಜ್ಯಸಭೆಗೆ ಪ್ರವೇಶಿಸಿದಾಗ ಅವರ ರಾಜಕೀಯ ಜೀವನ ಪ್ರಾರಂಭವಾಯಿತು. ಕೇವಲ ನಾಲ್ಕು ತಿಂಗಳ ನಂತರ, ಅವರು ಜೂನ್‌ನಲ್ಲಿ ಪಿವಿ ನರಸಿಂಹ ರಾವ್ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ನೇಮಕಗೊಂಡರು, ಇದು ಭಾರತದ ಆರ್ಥಿಕತೆಯಲ್ಲಿ ಭಾರಿ ಪರಿವರ್ತನೆಗೆ ಕಾರಣವಾಗಿತ್ತು.

ದೆಹಲಿಗೆ ಮರಳಿದ ಖರ್ಗೆ, ರಾಹುಲ್

ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬೆಳಗಾವಿಯಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ತೆರಳಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.