ಬೆಳಗಾವಿ : ಬೈಲಹೊಂಗಲ ತಾಲೂಕು ಮರಕಂಬಿ ಗ್ರಾಮದ
ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಬಾಯ್ಲರ್ ಸ್ಪೋಟದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಳಗಾವಿ ಮತ್ತು ಬೈಲಹೊಂಗಲ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಬುಧವಾರ ಮಧ್ಯಾಹ್ನ 2 ಗಂಟೆಗೆ ಮರಕುಂಬಿ ಗ್ರಾಮದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಿಸಿ ಪದಾರ್ಥ (ಮಳ್ಳಿ) ಮೈಮೇಲೆ ಬಿದ್ದು ಗಾಯವಾಗಿದೆ. ದೂರು ಆಧರಿಸಿ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



