ಹೊಸದಿಲ್ಲಿ : ಇದೇ ಮೊದಲ ಬಾರಿಗೆ ಹಿಂದಿಯಲ್ಲೂ ವೈದ್ಯಕೀಯ ಶಿಕ್ಷಣ ಪಡೆಯುವ ಅವಕಾಶ ಸಿಗಲಿದ್ದು, ಸದ್ಯ ಮಧ್ಯಪ್ರದೇಶದಲ್ಲಿ ಇದನ್ನು ಆರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇತರೆ ಪ್ರಾದೇಶಿಕ ಭಾಷೆಗಳಲ್ಲೂ ಆಯಾ ರಾಜ್ಯಗಳಲ್ಲಿ ಎಂಬಿಬಿಎಸ್ ಶಿಕ್ಷಣ ಪಡೆಯುವ ಅವಕಾಶ ಸಿಗಲಿದೆ.
ಈಗಾಗಲೇ 97 ವೈದ್ಯಕೀಯ ಕಾಲೇಜಿನ ಶಿಕ್ಷಕರು, ತಜ್ಞರು 5,568 ಗಂಟೆಗಳಿಗೂ ಅಧಿಕ ಕಾಲ ಕಾರ್ಯ ನಿರ್ವಹಿಸಿ ಎಂಬಿಬಿಎಸ್ ಇಂಗ್ಲಿಷ್ ಪಠ್ಯದ ಹಿಂದಿ ಅನುವಾದ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ತಾಂತ್ರಿಕ ಪದಗಳನ್ನು ಇಂಗ್ಲೀಷ್ ನಲ್ಲಿಯೇ ಇರಿಸಿಕೊಳ್ಳಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ ಶಾ ಹಿಂದಿ ಭಾಷಾ ವೈದ್ಯಕೀಯ ಶಿಕ್ಷಣದ ಪಠ್ಯ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಲಿದ್ದು, ಮಧ್ಯಪ್ರದೇಶದ ಹದಿಮೂರು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಹಿಂದಿ ಭಾಷೆಯಲ್ಲೂ ಶಿಕ್ಷಣವನ್ನು ನೀಡಲಾಗುತ್ತದೆ. ಈ ಮೂಲಕ ಹಿಂದಿಯಲ್ಲಿ ಎಂಬಿಬಿಎಸ್ ಶಿಕ್ಷಣ ನೀಡುವ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಮಧ್ಯಪ್ರದೇಶ ಪಾತ್ರವಾಗಲಿದೆ.