ಹುಬ್ಬಳ್ಳಿ : ಬಾದಾಮಿ, ರಾಯಚೂರು ಸೇರಿದಂತೆ ರಾಜ್ಯದ ಐದು ಕಡೆ 18 ತಿಂಗಳಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಾದಾಮಿ, ರಾಯಚೂರು, ದಾವಣಗೆರೆ, ಚಿಕ್ಕಮಗಳೂರು, ಕೊಪ್ಪಳದಲ್ಲಿ ಮುಂಬರುವ 18 ತಿಂಗಳಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಲಾಗುವುದು.
ಹುಬ್ಬಳ್ಳಿ ಹಾಗೂ ಬೆಳಗಾವಿಯಲ್ಲಿ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾರಂಭಿಸುವ ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯದ ಎಸ್ಸಿ, ಎಸ್ ಟಿ ಜನಾಂಗದವರಿಗೆ ಕೈಗಾರಿಕೆ ಸ್ಥಾಪಿಸಲು ಶೇ. 75 ರಷ್ಟು ಸಬ್ಸಿಡಿಯನ್ನು ಮತ್ತು ಇತರ ಅತ್ಯಂತ ಹಿಂದುಳಿದ ಸಮುದಾಯಗಳಿಗೆ ಸಬ್ಸಿಡಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗಿದೆ ಎಂದರು.