ಬೆಳಗಾವಿ, ಸೆ.೨೯ : ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಶುಕ್ರವಾರ ಚಾಲನೆ ನೀಡಿದರು.
ಮೋಡ ಬಿತ್ತನೆ ಕಾರ್ಯಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರ(ಡಿಜಿಸಿಎ) ಕಚೇರಿಯು ಗ್ರೀನ್ ಸಿಗ್ನಲ್ ನೀಡಿದ್ದು ಹುದಲಿಯ ಬೆಳಗಾಂ ಶುಗರ್ಸ್ ಪ್ರೆöÊ.ಲಿಮಿಟಡ್ ಮೋಡ ಬಿತ್ತನೆ ಮಾಡುತ್ತಿದೆ. ಸೆ.೨೯ ಹಾಗೂ ೩೦ ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ.
ಕ್ಯಾಪ್ಟನ್ ವೀರೇಂದ್ರ ಸಿಂಗ್ ಹಾಗೂ ಕ್ಯಾಪ್ಟನ್ ಆದರ್ಶ ಪಾಂಡೆ ನೇತೃತ್ವದಲ್ಲಿ ವಿಟಿ-ಕೆಸಿಎಂ ವಿಮಾನವು ಮೋಡ ಬಿತ್ತನೆ ಮಾಡಲಿದೆ. ಕಡಿಮೆ ಎತ್ತರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಎಸಿಎಲ್-೨ ಅಯೋಡೈಡ್ ಹಾಗೂ ೨೦ ಸಾವಿರ ಅಡಿ ಮೇಲೆ ಎತ್ತದರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಲ್ವರ್ ಐಯೋಡೈಡ್ ರಾಸಾಯನಿಕ ಸಿಂಪಡಿಸಲಾಗುತ್ತದೆ.
ಒಂದು ವೇಳೆ ನಿರ್ದಿಷ್ಟ ಪ್ರದೇಶದ ವ್ಯಾಪ್ತಿಯಲ್ಲಿ ಮೋಡಗಳು ಇದ್ದರೆ ರಾಸಾಯನಿಕ ಸಿಂಪಡಣೆ ಮಾಡಿದ ಐದು ನಿಮಿಷಗಳಲ್ಲಿ ಮಳೆ ಬರಬಹುದು. ಒಂದು ವೇಳೆ ಮೋಡಗಳು ಇರದಿದ್ದಲ್ಲಿ ಹಾಗೇ ಹಿಂದಿರುಗಲಾಗುತ್ತದೆ ಎಂದು ಮೋಡ ಬಿತ್ತನೆ ವಿಮಾನದ ತಾಂತ್ರಿಕ ಸಿಬ್ಬಂದಿ ತಿಳಿಸಿದರು.
ಬೆಳಗಾವಿಯಲ್ಲಿ ಮೋಡಗಳು ಕಂಡುಬAದಿರುವುದರಿAದ ಮೋಡ ಬಿತ್ತನೆಗೆ ಪೂರಕ ವಾತಾವರಣವಿದೆ ಎಂದು ಹೇಳಿದರು.
೫ ರಿಂದ ೧೦ ಸಾವಿರ ಅಡಿಗಳ ಮೇಲೆ ಮೋಡಗಳನ್ನು ಆಕರ್ಷಿಸಲು ಸಿಲ್ವರ್ ಐಯೋಡೈಡ್ ರಾಸಾಯನಿಕವನ್ನು ಆಗಸದಲ್ಲಿ ಸಿಂಪಡಣೆ ಮಾಡಲಾಗುತ್ತದೆ ಎಂದು ಸಂಸ್ಥೆಯ ಅಧಿಕಾರಿಗಳು ವಿವರಿಸಿದರು.
ಶಾಸಕ ಆಸೀಫ ಸೇಠ, ವಿಧಾನ ಪರಿಷತ್ ಸದಸ್ಯ ಚನ್ನರಾe ಹಟ್ಟಿಹೊಳಿ, ರಾಹುಲ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.