ಬೆಳಗಾವಿ : ಬೆಂಗಳೂರಿನಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಇಂದು ಮುಖ್ಯಮಂತ್ರಿಗಳನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಬೆಳಗಾವಿ ಬಿಮ್ಸ ಆಸ್ಪತ್ರೆಯ ಆವರಣದಲ್ಲಿ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗಾಗಿ ಮನವಿಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲೆಯ ಅನೇಕ ಕಡೆಗಳಿಂದ ಮತ್ತು ಹೊರ ರಾಜ್ಯಗಳಾದ ಗೋವಾ ಮತ್ತು ಮಹಾರಾಷ್ಟ್ರಗಳಿಂದ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ರೋಗಿಗಳು ಬರುವುದರಿಂದ ಹಾಗೂ ಜನಸಂಖ್ಯೆಯು ಹೆಚ್ಚಾಗಿರುವುದರಿಂದ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಿಮ್ಸ ಆವರಣದಲ್ಲಿ ಹೆಚ್ಚುವರಿಯಾಗಿ 450 ಹಾಸಿಗೆಯ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ವಿನಂತಿಸಲಾಗಿದೆ ಎಂದರು.
ನಮ್ಮ ಮನವಿಗೆ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸಕಾರಾತ್ಮಕ ಸ್ಪಂದನೆಯನ್ನು ವ್ಯಕ್ತಪಡಿಸಿದ್ದು, ತ್ವರಿತವಾಗಿ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.