ಧಾರವಾಡ : ತಡರಾತ್ರಿ ಧಾರವಾಡದ ಎಸ್ ಪಿ ಕಚೇರಿ ಎದುರು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ ಸಾವನ್ನಪ್ಪಿದ್ದಾರೆ.
ಧಾರವಾಡದ ಎಸ್ ಪಿ ಕಚೇರಿ ಎದುರು ಶಿವಣ್ಣ ಬೆಲ್ಲದ ಅವರ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಶಿವಣ್ಣ ಬೆಲ್ಲದ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

