Please assign a menu to the primary menu location under menu

National

ಪ್ರವಾದಿಗಳ ಅವಹೇಳನ : ಬಿಜೆಪಿಯಿಂದ ಶಾಸಕ ಅಮಾನತ್ತು


ಹೈದ್ರಾಬಾದ‌ : ಪ್ರವಾದಿ ಮಹಮ್ಮದರ ಕುರಿತು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಟಿ. ರಾಜಾ ಸಿಂಗನನ್ನು ಬಿಜೆಪಿ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಈ ಬಗ್ಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, 10 ದಿನಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದೆ. ಈ ಹಿಂದೆ ಪ್ರವಾದಿ ಮೊಹಮ್ಮದ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಹೈದರಾಬಾದ್‌ನಲ್ಲಿ ರಾಜಾರನ್ನು ಪೊಲೀಸರು ಬಂಧಿಸಿದ್ದರು.

ಬಿಜೆಪಿ ನಾಯಕನ ಬಂಧನಕ್ಕೆ ಒತ್ತಾಯಿಸಿ, ಸೋಮವಾರ ರಾತ್ರಿ ಹೈದರಾಬಾದ್‌ನ ಹಲವು ಭಾಗಗಳಲ್ಲಿ ಹಲವಾರು ಸಮುದಾಯದವರು ಪ್ರತಿಭಟನೆ ನಡೆಸಿದ್ದರು.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮೂಲಗಳು, ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಹಲವಾರು ಪಕ್ಷದ ಶಾಸಕರು ಮತ್ತು ಕೌನ್ಸಿಲರ್‌ಗಳು ಪೊಲೀಸ್ ಠಾಣೆಗಳನ್ನು ತಲುಪಿ, ಅಲ್ಲಿ ಪ್ರತಿಭಟನೆ ನಡೆಸಿದರು ಮತ್ತು ರಾಜಾ ಸಿಂಗ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದರು.


Samadarshi News

Leave a Reply