This is the title of the web page

ರಾಜ್ಯದಲ್ಲಿ ಇಂದಿನಿಂದ ಮುಂಗಾರು ಮಳೆ ಆರಂಭ

ಬೆಂಗಳೂರು, ೧೧- ಇಂದಿನಿಂದ ರಾಜ್ಯದಲ್ಲಿ ಮಳೆಗಾಲ ಆರಂಭವಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಮಳೆಯ ಅಬ್ಬರದಿಂದ ಇಂದಿನಿಂದ ನಾಲ್ಕು ದಿನ ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆಯಾಗಲಿದೆ.

ಶನಿವಾರ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಅದರಂತೆ ಬೆಂಗಳೂರು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು, ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜೂನ 14ರ ವರೆಗೆ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

You might also like
Leave a comment