ಹಾವೇರಿ: ಸಾರಿಗೆ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಜಾತ್ರೆಗೆ ಹೊರಟ್ಟಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ 15 ಕ್ಕೂ ಅಧಿಕ ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಹಾವೇರಿ ತಾಲ್ಲೂಕಿನ ಬಸಾಪುರ ಗ್ರಾಮದ ಬಳಿ ನಡೆದ ಘಟನೆ ಇದಾಗಿದ್ದು,ಹಳೇರಿತ್ತಿ ಗ್ರಾಮದಿಂದ ಹಾವನೂರು ಜಾತ್ರೆಗೆ ಹೋಗುತ್ತಿದ್ದ ವೇಳೆ ದುರ್ಘಟನೆ.ಬೇಟಗೇರಿ ಕುಟುಂಬ ಸದಸ್ಯರು ಜಾತ್ರೆ ಹೊರಟ್ಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು ಸ್ಥಳಕ್ಕೆ ಹಾವೇರಿ ತಹಶಿಲ್ದಾರರ ಶರಣಮ್ಮ ಹಾಗೂ ಗುತ್ತಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .ಗುತ್ತಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣದಾಖಲಾಗಿದೆ.
ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ಬಳಿ ಸಾರಿಗೆ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ,15 ಕ್ಕೂ ಹೆಚ್ಚು ಜನರಿಗೆ ಗಾಯ.



