This is the title of the web page

ಕಲಬುರ್ಗಿ ಜಿಲ್ಲಾಧಿಕಾರಿಗಳ ಜೊತೆ ಅಸಭ್ಯ ವರ್ತನೆಯ ಆರೋಪ; 20 ಕ್ಕೂ ಹೆಚ್ಚು ರೈತರ ಬಂಧನ

 

ಕಲಬುರ್ಗಿ: ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ ನಡೆಸಿದ ಬಳಿಕ, ಮನವಿ ಪತ್ರ ನೀಡುವ ಸಂದರ್ಭದಲ್ಲಿ ರೈತ ಮುಖಂಡರು ಜಿಲ್ಲಾಧಿಕಾರಿಗಳ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ 20ಕ್ಕೂ ಹೆಚ್ಚು ರೈತರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಚಿತ್ತಾಪುರ ಓರಿಯೆಂಟ್ ಸಿಮೆಂಟ್ ಕಾರ್ಖಾನೆ ವಿರುದ್ಧ ಹಲವು ರೈತರು ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯ ಬಳಿಕ, ಜಿಲ್ಲಾಧಿಕಾರಿಗಳ ಕಚೇರಿಗೆ ಮನವಿ ಪತ್ರ ನೀಡಲು ತೆರಳಿದ್ದರು.

ಡಿಸಿ ಕಚೇರಿ ಒಳ ತೆರಳಿದ್ದಂತೆ ರೈತರು ಹಾಗೂ ಕಲಬುರ್ಗಿ ಡಿಸಿ ಯಶವಂತ ಗುರಿಕಾರ ನಡುವೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಪೊಲೀಸರಿಗೆ ಸೂಚಿಸಿದ ಕಾರಣ, ಸ್ಟೇಷನ್ ಬಜಾರ್ ಠಾಣೆಯ ಪೊಲೀಸರು 20ಕ್ಕೂ ಹೆಚ್ಚು ರೈತರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

You might also like
Leave a comment