ಹುಬ್ಬಳ್ಳಿ : ಖಾಸಗಿ ಬಸ್ ನ ಚಕ್ರ ಸ್ಫೋಟಗೊಂಡು ನಡುರಸ್ತೆಯಲ್ಲೇ ಬಸ್ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಪೂನಾದಿಂದ ಉಡುಪಿಗೆ ಹೋಗುತ್ತಿದ್ದ ಬಸ್ಸಿನ ಹಿಂದಿನ ಚಕ್ರ ಸ್ಫೋಟ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಡುರಸ್ತೆಯಲ್ಲೇ ಬಸ್ ಹೊತ್ತಿ ಉರಿದಿದೆ. ಆದರೆ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರ ಪ್ರಾಣ ಉಳಿದಂತಾಗಿದೆ. ಬಸ್ಸಿನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರು ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಖಾಸಗಿ ಬಸ್ ಪುಣೆಯಿಂದ ಉಡುಪಿಗೆ ಹೋಗುತ್ತಿದ್ದ ವೇಳೆ ಹುಬ್ಬಳ್ಳಿಯ ಕಾರವಾರ ರಸ್ತೆಯ ಬಳಿ ತಡರಾತ್ರಿ 2.45 ರ ಸುಮಾರಿಗೆ ಘಟನೆ ನಡೆದಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.