ಯಾದಗಿರಿ : ಅಂಬೇಡ್ಕರ ಅವರ 66ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಬುದ್ಧ ವಿಹಾರ ಟ್ರಸ್ಟ ಮತ್ತು ದಲಿತ ಸಂಘಟನೆಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 400 ಕ್ಕೂ ಹೆಚ್ಚು ಜನರು ಬೌದ್ಧ ಧರ್ಮವನ್ನು ಸ್ವೀಕರಿಸಿದರು.
ನಾಗಪುರದ ದೀಕ್ಷಾಭೂಮಿಯಲ್ಲಿ ಅಂಬೇಡ್ಕರ ಅವರು ತಮ್ಮ ಸಾವಿರಾರು ಅನುಯಾಯಿಗಳೊಂದಿಗೆ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ.
ಅಂಬೇಡ್ಕರ ಅವರ ಮೊಮ್ಮಗಳು ರಾಮತಾಯಿ ಅಂಬೇಡ್ಕರ ಅವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬೌದ್ಧ ಧರ್ಮವು ವೈಜ್ಞಾನಿಕ ಧರ್ಮವಾಗಿದೆ ಮತ್ತು ಉತ್ತಮ ಜೀವನವನ್ನು ಹೇಗೆ ನಡೆಸಬೇಕು ಎಂಬುದರ ಬಗ್ಗೆ ಮಾರ್ಗದರ್ಶನ ನೀಡುತ್ತದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
ಬೌದ್ಧ ಧರ್ಮವನ್ನು ಸ್ವೀಕರಿಸಿದವರಲ್ಲಿ ಮಹಿಳೆಯರು ಮತ್ತು ಮಕ್ಕಳು ಇದ್ದರು. ಅವರು 22 ಪ್ರತಿಜ್ಞೆಗಳನ್ನು ತೆಗೆದುಕೊಂಡರು.